ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡು ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ರಾಜ್ಯ ಅಧ್ಯಕ್ಷ ಆಗಿರುವ ಕುಮಾರಸ್ವಾಮಿ ಅವರಿಗೆ ಈ ಬಾರಿ ಎರಡೂ ಕ್ಷೇತ್ರದಲ್ಲಿ ಜನಬೆಂಬಲ ಸಿಗಲಿದೆಯಾ ಕಾದು ನೋಡಬೇಕಿದೆ.

ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ.ಎರಡು ಕ್ಷೇತ್ರಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಜೆಡಿಎಸ್ ರಾಜ್ಯಾದ್ಯಕ್ಷರಾದ ಕುಮಾರಸ್ವಾಮಿ ಅವರು ಶುಕ್ರವಾರದಂದು ರಾಮನಗರ ಮತ್ತು ಚನ್ನಪಟ್ಟಣದ ಚುನಾವಣೆ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಅವರು ಎರಡು ಕ್ಷೇತ್ರದ ಜನತೆ ಮೇಲೆ ನನಗೆ ಅಪಾರ ವಿಶ್ವಾಸವಿದೆ ಮತ್ತು ಎರಡು ಕ್ಷೇತ್ರದ ಕಾರ್ಯಕರ್ತರು ಎರಡು ಕ್ಷೇತ್ರದಿಂದ ನೀವೇ ಸ್ಪರ್ಧಿಸಿ ಎಂದು ಒತ್ತಾಯ ಮಾಡಿದ್ದರಿಂದ ನಾನು ಎರಡು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ.

ಜನತೆ ನನ್ನನ್ನು ಗೆಲ್ಲಿಸುತ್ತಾರೆ ಎಂದರು.ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರು ತಮ್ಮ ಹಾಗೂ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಆಸ್ತಿ ವಿವರವನ್ನು ಚುನಾವಣಾ ಅಧಿಕಾರಿಗಳಿಗೆ ಒದಗಿಸಿದ್ದಾರೆ.ಅವರು ನೀಡಿರುವ ಮಾಹಿತಿಯ ಪ್ರಕಾರ ಎಚ್‍ಡಿ ಕುಮಾರಸ್ವಾಮಿಯವರು ಒಟ್ಟು 42,91,16,270 ರೂ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಅನಿತಾ ಕುಮಾರಸ್ವಾಮಿಯವರು ಒಟ್ಟು 87,22,90,000 ರೂ ಮೌಲ್ಯದ ಆಸ್ತಿ ಹೊಂದಿದ್ದಾರೆ. 12.14 ಲಕ್ಷ ರೂಪಾಯಿ ನಗದನ್ನು ಎಚ್‍ಡಿಕೆ ಹೊಂದಿದ್ದಾರೆ. ಎಚ್‍ಡಿ ಕುಮಾರಸ್ವಾಮಿ ಆಸ್ತಿ

ಚರಾಸ್ತಿ – 7,80,90,570 ರೂ.
ಸ್ಥಿರಾಸ್ತಿ – 35,10,26,000 ರೂ.
ಒಟ್ಟು – 42,91,16,270 ರೂ.
ಅನಿತಾ ಕುಮಾರಸ್ವಾಮಿ ಆಸ್ತಿ
ಚರಾಸ್ತಿ – 84,22,90,000 ರೂ.
ಸ್ಥಿರಾಸ್ತಿ – 30 ಕೋಟಿ ರೂ.
ಒಟ್ಟು – 87,22,90,000 ರೂ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here