ಮಳೆ ಜೋರು.! ಈ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ
ಉಡುಪಿ: ಕರ್ನಾಟಕದ ಅನೇಕ ಕಡೆ ಮಳೆ ಜೋರಾಗಿದೆ ಅದರಲ್ಲೂ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ದಕ್ಷಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಕಾರವಾರ, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ತಾಲೂಕುಗಳಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.