ಪತ್ರಿಕೆಗಳಲ್ಲಿ ಸಾಮಾನ್ಯವಾಗಿ ಜಾಹೀರಾತುಗಳು ಇದ್ದೇ ಇರುತ್ತವೆ. ಅದರಲ್ಲಿ ವಿವಿಧ ಉತ್ಪನ್ನಗಳ, ಜನ್ಮದಿನದ, ಸಭೆ, ಸಮಾರಂಭಗಳ ಹೀಗೆ ಹಲವು ಜಾಹೀರಾತು ಇರುತ್ತದೆ. ಆದರೆ ಹೈಕೋರ್ಟ್ ತನ್ನ ಸಮನ್ಸ್ ಕೂಡಾ ಪತ್ರಿಕೆಯ ಜಾಹೀರಾತಿನಲ್ಲಿ ನೀಡಿರುವ ಒಂದು ವಿಶೇಷ ಕರ್ನಾಟಕದಲ್ಲಿ ನಡೆದಿದೆ. ಲೋಕಸಭೆ ಚುನಾವಣೆ ವೇಳೆಯಲ್ಲಿ ಮಾಜಿ ಸಚಿವ ರೇವಣ್ಣನವರ ಪುತ್ರ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ನವರು ನಾಮಪತ್ರದೊಂದಿಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ‌ ನೀಡಲಾಗಿದೆ ಎಂಬ ಆರೋಪ ಮಾಡಲಾಗಿತ್ತು. ಈ ವಿಷಯವಾಗಿ ಸೆ.30 ರಂದು ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಸಮನ್ಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರ ವಿರುದ್ಧ , ಮಾಜಿ ಸಚಿವರಾದ ಎ.ಮಂಜು ಹಾಗೂ ವಕೀಲ ಜಿ.ದೇವರಾಜೇಗೌಡ ಅವರು ಪ್ರತ್ಯೇಕವಾಗಿ ದೂರು ದಾಖಲಿಸಿದ್ದರು. ಈ ಪ್ರಕರಣಗಳ ವಿಚಾರಣೆಗೆ ಸೆ.30 ರಂದು ಬೆಳಗ್ಗೆ 10.30ಕ್ಕೆ ಖುದ್ದಾಗಿ ಇಲ್ಲವೇ ವಕೀಲರ ಮೂಲಕ ಹಾಜರಾಗುವಂತೆ ಹೈ ಕೋರ್ಟ್ ಪ್ರಜ್ವಲ್ ರೇವಣ್ಣನವರಿಗೆ ತನ್ನ ಸಮನ್ಸ್ ಮೂಲಕ ಸ್ಪಷ್ಟವಾದ ನಿರ್ದೇಶನವನ್ನು ನೀಡಿದೆ. ಇದಕ್ಕೆ ಮೊದಲು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರು ತಮಗೆ ಕೋರ್ಟ್ ನಿಂದ ಯಾವುದೇ ಸಮನ್ಸ್ ಬಂದಿಲ್ಲವೆಂದು ಹೇಳಿದ್ದರು. ಅವರ ಈ ನಿಲುವಿನಿಂದ ಬೇಸತ್ತ ಹೈಕೋರ್ಟ್ ಪತ್ರಿಕೆಯ ಮೂಲಕ ಸಮನ್ಸ್ ಜಾರಿ ಮಾಡಿದೆ ಎನ್ನಲಾಗಿದೆ.

ಕೋರ್ಟ್ ಸ್ಥಳೀಯ ಪತ್ರಿಕೆಯಲ್ಲಿ ಸಮನ್ಸ್ ಜಾರಿ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ನೀಡಲಾಗಿದೆ. ಈಗ ಪ್ರಜ್ವಲ್ ರೇವಣ್ಣನವರು ಸೆ. 30 ರಂದು ಖುದ್ದಾಗಿ ಅಥವಾ ಅವರ ಪರವಾಗಿ ಅವರ ವಕೀಲರು ನ್ಯಾಯಾಧೀಶರ ಮುಂದೆ ಹಾಜರಾಗಲೇಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ಈಗ ಕೋರ್ಟ್ ಸಮನ್ಸ್ ಬಂದಿಲ್ಲವೆಂದು ಹೇಳಲು ಯಾವುದೇ ಅವಕಾಶವೂ ಇಲ್ಲ.‌

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here