ನವದೆಹಲಿ, ಸೆ.19: ಜನರ ಆರೋಗ್ಯ ಮೇಲೆ ಪರಿಣಾಮ ಬೀರುವಂತ ಹುಕ್ಕಾಬಾರ್ ಗಳನ್ನು ರಾಜ್ಯಾಧ್ಯಂತ ನಿಷೇಧಿಸೋ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ವಿಧಾನಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವ ಬಿ.ನಾಗೇಂದ್ರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಯುವಜನತೆ ಹಾಗೂ ಮಕ್ಕಳ ಮೇಲೆ ದಿನೇ ದಿನೇ ಹುಕ್ಕಾಬಾರ್ ಗಳು ವ್ಯಾಪಕವಾಗಿ ಪರಿಣಾಮ ಬೀರುತ್ತಿದ್ದಾವೆ. ಇಂತಹ ಆರೋಗ್ಯಕ್ಕೆ ಮಾರಕವಾಗುವಂತ ಹುಕ್ಕಾಬಾರ್ ಗಳನ್ನು