ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಅಭಿಮಾನಿಗಳ ಬಳಗವನ್ನು ಹೊಂದಿರುವ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಮಾನವೀಯತೆ ಮರೆತಿದ್ದಾರೆ ಎಂದು ಜನ ಕೇಳುತ್ತಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ 76ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಫ್ಲವರ್ ಶೋ ಏರ್ಪಾಟು ಮಾಡಲಾಗಿದ್ದು ಈ ಫ್ಲವರ್ ಶೋ ನೋಡಲು ನಟಿ ರಚಿತಾ ರಾಮ್ ಅವರು ಬಂದಿದ್ದ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ರಚಿತಾ ರಾಮ್ ಕಾರು ಗುದ್ದಿದ್ದು ಇದರಿಂದ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.