ಬೆಂಗಳೂರು: ರಾಜ ರಾಜಕೀಯದಲ್ಲಿ ಪ್ರತಿದಿನ ಹೊಸ ತಿರುವು ಕಾಣುತ್ತಿದ್ದು, ವಿಪಕ್ಷ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಲು ಸಜಾಗುತ್ತಿರುವುದರಿಂದ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷ ಸೇರಲು ಕೆಲವರು ಒಳಗಿಂದೊಳಗಡೆ ಮಾತುಕತೆ ನಡೆಸಿದ್ದಾರೆಂದು ತಿಳಿದು ಬರುತ್ತಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಶಾಸಕ ಮುನಿರತ್ನ ಅವರು, ನಾನು ಬೇಕಾದರೆ ರಾಜಕೀಯ ನಿವೃತ್ತ ತೆಗೆದುಕೊಳ್ಳುತ್ತೇನೆ ಆದರೆ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲವೆಂದು ಕಡಾ ಖಂಡಿತವಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಾರೆಂಬ ವಿಚಾರಕ್ಕೆ ಸಂಬಂಧಿಸಿ ನಾನಂತೂ ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಆರ್.ಆರ್. ನಗರ ಶಾಸಕ ಮುನಿರತ್ನ ತಿಳಿಸಿದ್ದಾರೆ. 17 ಜನರಲ್ಲಿ ಯಾರು ಕಾಂಗ್ರೆಸ್ಗೆ ಹೋಗುತ್ತಾರೋ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಹೋಗುವ ಅವಶ್ಯಕತೆ ನನಗೆ ಇಲ್ಲ. ಅಗತ್ಯ ಬಿದ್ದರೆ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಹೋಗುವುದಿಲ್ಲ ಎಂದರು.
ಮುನಿರತ್ನ ಭೇಟಿ ಮಾಡಿದ್ರು ಎಂಬ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಡಿಕೆಶಿ ಮನೆಗೆ ಯಾರು ಹೋಗಿದ್ರು?, ಕಳ್ಳತನದಿಂದ ಯಾರಾದ್ರೂ ಹೋಗಿದ್ರಾ?, ಬುರ್ಕಾ ಹಾಕಿಕೊಂಡು ಹೋಗಿದ್ರಾ? ಇದನ್ನ ಹೇಳಲಿ. ಕ್ಷೇತ್ರದ ವಿಚಾರ ಬಗ್ಗೆ ಮಾತಾಡಿದ್ದನ್ನು ರಾಜಕೀಯವಾಗಿ ಡಿಕೆಶಿ ಬಳಸಿಕೊಳ್ಳೋದು ಬೇಡ ಎಂದು ತಿಳಿಸಿದರು
Disclaimer: This Story is auto-aggregated by a Syndicated Feed and has not been Created or Edited By City Big News Staff.