City Big News Desk.
ಬೆಂಗಳೂರು: ಕಾಂಗ್ರೆಸ್ ಪಕ್ಷವು 2023 ನೆಯ ವಿಧಾನಸಭಾ ಚುನಾವಣೆಗೂ ಮುನ್ನ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರ ಪ್ರಕಾರ ಈಗಾಗಲೇ ಐದು ಗ್ಯಾರಂಟಿಗಳಲ್ಲಿ ಮೂರು ಗ್ಯಾರಂಟಿಯನ್ನು ಜಾರಿ ಮಾಡಲಾಗಿದೆ. ಇನ್ನು ನಾಲ್ಕನೆಯ ಗ್ಯಾರಂಟಿ ಆದಂತಹ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ಹೌದು, ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯೊಡತಿಗೆ ಮಾಸಿಕ 2000 ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆಗೆ ಇಂದು (ಬುಧವಾರ) ಚಾಲನೆ ನೀಡಲಾಗುತ್ತಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ.
ಶಾಸಕ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉಪಸ್ಥಿತರಿರುವರು.
ಯೋಜನೆಯಡಿ ಆ.15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.