ಒಂದೆಡೆ ಯುದ್ಧಭೀತಿ ಇನ್ನೊಂದೆಡೆ ಜಾಗತಿಕ ಒತ್ತಡದ ಅಡಕತ್ತರಿಯಲ್ಲಿ ಸಿಲುಕಿಕೊಂಡಿರುವ ಪಾಕಿಸ್ತಾನ ಭಾರತದೊಂದಿಗೆ ಶಾಂತಿ ಮಾತುಕತೆಗಾಗಿ ಹಾತೊರೆಯಲಾರಂಭಿಸಿದೆ. ಈ ಸಂಬಂಧ ಅದು ದೂರವಾಣಿಯಲ್ಲಾದರೂ ಸರಿಯೇ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಂಪರ್ಕ ಏರ್ಪಡಿಸಿಕೊಡುವಂತೆ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅಂಗಲಾಚುತ್ತಿದ್ದಾರೆ.ಪಾಕಿಸ್ತಾನದ ಸುದ್ದಿಗಾರರೊಂದಿಗೆ ಮಾತನಾಡಿರುವ ಪಾಕ್​ ವಿದೇಶಾಂಗ ಸಚಿವ ಶಾ ಮೊಹಮ್ಮದ್​​ ಖುರೇಶಿ ಭಾರತದೊಂದಿಗೆ ಮಾತುಕತೆಗೆ ಸಿದ್ಧವಿರುವುದಾಗಿ ಹೇಳಿದ್ದಾರೆ. ಈ ಕುರಿತು ಪ್ರಯತ್ನಗಳು ಆರಂಭವಾಗಿವೆ.

ಕನಿಷ್ಠ ದೂರವಾಣಿ ಮೂಲಕವಾದರೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸಲು ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ.ಆದರೆ, ಪಾಕಿಸ್ತಾನ ಬಂಧಿಸಿರುವುದಾಗಿ ಹೇಳುತ್ತಿರುವ ಭಾರತೀಯ ವಾಯುಪಡೆ ಪೈಲಟ್​ ವಿಂಗ್​ ಕಮಾಂಡರ್​ ಅಭಿನಂದನ್​ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಬೇಕು. ಜತೆಗೆ ಭಯೋತ್ಪಾದಕರನ್ನು ಸದೆಬಡಿಯುವ ಕುರಿತು ತಾವು ನೀಡಿರುವ ವಾಗ್ದಾನದಂತೆ ನಡೆದುಕೊಳ್ಳಬೇಕು. ಇಲ್ಲವಾದರೆ ಮಾತುಕತೆ ನಡೆಸುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ಆದರೆ, ಪಾಕಿಸ್ತಾನ ಬಂಧಿಸಿರುವುದಾಗಿ ಹೇಳುತ್ತಿರುವ ಭಾರತೀಯ ವಾಯುಪಡೆ ಪೈಲಟ್​ ವಿಂಗ್​ ಕಮಾಂಡರ್​ ಅಭಿನಂದನ್​ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಬೇಕು. ಜತೆಗೆ ಭಯೋತ್ಪಾದಕರನ್ನು ಸದೆಬಡಿಯುವ ಕುರಿತು ತಾವು ನೀಡಿರುವ ವಾಗ್ದಾನದಂತೆ ನಡೆದುಕೊಳ್ಳಬೇಕು. ಇಲ್ಲವಾದರೆ ಮಾತುಕತೆ ನಡೆಸುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here