ಲಾಕ್‍ಡೌನ್ ಕುರಿತಾಗಿ ಮಾತನಾಡಿರುವ ರಾಜ್ಯದ ಮುಖ್ಯಮಂತ್ರಿಯವರಾದ ಬಿ‌.ಎಸ್.ಯಡಿಯೂರಪ್ಪ ಅವರು ಇದನ್ನು ಜನರು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮಾಡಿದ್ದರೆ. ಅವರು ಮಾದ್ಯಮಗಳಿಗೆ ತಮ್ಮ‌ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಲಾಕ್‍ಡೌನ್ ಅವಧಿಯು ಮುಂದುವರೆಯುವುದಿಲ್ಲ ಆದರೆ ಅದು ನಾವು ಅದನ್ನು ಹೇಗೆ ಕಟ್ಟುನಿಟ್ಟಾಗಿ ಪಾಲಿಸುತ್ತೇವೆ ಎಂಬುದನ್ನು ಅವಲಂಬಿಸಿದೆ ಎಂದಿದ್ದಾರೆ.‌ ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವುದಕ್ಕಾಗಿ, ಜನರು ಲಾಕ್‍ಡೌನ್ ಅನ್ನು ಕಟ್ಟು ನಿಟ್ಟಾಗಿ ಪಾಲಿಸಿದರೆ ಎಲ್ಲರ ಒಳಿತು ಸಾಧ್ಯ ಎಂದಿದ್ದಾರೆ.

ಇದು ಸಂದಿಗ್ಧ ಪರಿಸ್ಥಿತಿಯಾಗಿದ್ದು, ಈಗ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕು, ಕೊರೊನಾ ವೈರಸ್ ನಮ್ಮೆಲ್ಲರ ತಾಳ್ಮೆಯನ್ನು ಪರೀಕ್ಷಿಲೆಂದೇ ಎದುರಾಗಿರುವ ಒಂದು ವಿಪತ್ತು ಎಂದು ಸಿಎಂ ಅವರು ಹೇಳಿದ್ದಾರೆ. ಅಲ್ಲದೆ ಈ ಕುರಿತಾಗಿ ಅಂದರೆ 21 ದಿನಗಳ ಲಾಕ್ ಡೌನ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಧಿಸಿದ್ದಾರೆ. ಆದರರೆ ಇಂತಹ ಅನಿವಾರ್ಯ ಪರಿಸ್ಥಿತಿಯಿಂದಾಗಿ ಇಡೀ ದೇಶದ ಜನತೆಯಲ್ಲಿ ಕ್ಷಮೆಯನ್ನು ಪ್ರಧಾನಿಗಳು ಕೇಳಿದ್ದಾರೆ. ದೇಶದ ಪ್ರಧಾ‌ನಿ ದೇಶದ ಜನತೆಯ ಕ್ಷಮೆ ಕೇಳುವ ಅನಿವಾರ್ಯತೆಯನ್ನು ಜನ ಅರಿಯಬೇಕು, ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಜಗತ್ತಿನ ಇತಿಹಾಸದಲ್ಲಿ ಈ ರೀತಿಯ ಪರಿಸ್ಥಿತಿ ಎದುರಾಗಿರಲಿಲ್ಲ. ಆದರೆ ಈಗ ಅಂತಹುದೊಂದು ಪರಿಸ್ಥಿತಿ ಬಂದಿದ್ದು, ನಾವಿದನ್ನು ಎದುರಿಸಲೇಬೇಕಿದೆ ಎಂದಿದ್ದಾರೆ‌ ಯಡಿಯೂರಪ್ಪ ನವರು.ಪ್ರಧಾನಿಯವರ ಕೆಲಸವನ್ನು ಮೆಚ್ಚುವುದು ಮಾತ್ರವೇ ಅಲ್ಲದೇ ಜಾಗೃತ ನಾಗರಿಕರಾಗಿರುವ ನಾವೆಲ್ಲಾ ಅವರ ಆಜ್ಞೆಯನ್ನು ಪಾಲಿಸಬೇಕಿದೆ. ರಾಜ್ಯದಲ್ಲಿ ಕರ್ಫ್ಯೂ ಇದ್ದು ಅದನ್ನು ದಿಕ್ಕರಿಸಿ ಓಡಾಡದೆ ಮೋದಿಯವರ ಕರೆಗೆ ಬೆಲೆ ಕೊಡಿ ಎಂದಿದ್ದು, ನೂರಾರು ಜನರ ಪ್ರಾಣ ಉಳಿಸಲು ಹಗಲಿರುಳು ಶ್ರಮಿಸುತ್ತಿರುವ ವೈದ್ಯರು, ದಾದಿಯರು, ಆರೋಗ್ಯ ಸಿಬ್ಬಂದಿ ಮತ್ತು ನಾಗರಿಕ ಸೇವೆಯಲ್ಲಿ ತೊಡಗಿರುವ ಸಾವಿರಾರು ಕಾರ್ಯಕರ್ತರಿಗೆ ನಾವುಗಳು ನೈತಿಕ ಬೆಂಬಲ ವ್ಯಕ್ತಪಡಿಸುವ ಜೊತೆಗೆ ಅವರ ಮನೋಸ್ಥೈರ್ಯ ಕುಗ್ಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here