ಹತ್ತಾರು ಬಾರಿ ಮುಖಭಂಗ ವಾದರೂ ಪಾಕಿಸ್ತಾನಕ್ಕೆ ಮಾತ್ರ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಆಗಾಗ ಭಾರತದ ತಂಟೆಗೆ ಬಂದು ಬಾಲ ಮುದುರಿಕೊಂಡು ಹೋಗುವ ಪಾಕಿಸ್ತಾನ ಭಾರತದ ಗಡಿಯಲ್ಲಿ ಮತ್ತೆ ಬಾಲ ಬಿಚ್ಚಿದೆ. ಭಾರತದ ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಭಾರತೀಯ ಸೇನೆ ಕೂಡ ಇದಕ್ಕೆ ತಕ್ಕ ಉತ್ತರ ನೀಡುತ್ತಲೇ ಬಂದಿದೆ. ಕಳೆದ ರಾತ್ರಿಯಿಂದ ಕೂಡ ಪಾಕಿಸ್ತಾನ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು, ಶೆಲ್ ದಾಳಿ ನಡೆಸಿದೆ.

ಇದಕ್ಕೆ ಸೂಕ್ತ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ 3-4 ರೇಂಜರ್ಸ್ ಅನ್ನು ಸದೆಬಡೆದಿದೆ ಎನ್ನಲಾಗಿದೆ.ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನ ಸೇನೆ ಕಳೆದ ರಾತ್ರಿ ಟೈಲ್ಸ್-ರಾಜೌರಿ ಸೆಕ್ಟರ್‌ನಲ್ಲಿ ಭಾರತೀಯ ಸೇನೆ ಮೇಲೆ ತೀವ್ರ ಶೆಲ್ ದಾಳಿ ನಡೆಸಿದೆ.

ಇದಕ್ಕೆ ಭಾರತೀಯ ಸೇನೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.ಈ ಪ್ರತೀಕಾರದಲ್ಲಿ ಪಾಕಿಸ್ತಾನ ಸೇನೆಯ ಅನೇಕ ಶಿಬಿರಗಳು ನಾಶವಾದವು. ಇದಲ್ಲದೆ ಭಾರತೀಯ ಸೇನೆಯ ಈ ಕಾರ್ಯಾಚರಣೆಯಲ್ಲಿ 3-4 ಪಾಕಿಸ್ತಾನಿ ಸೈನಿಕರು ಸಹ ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here