ಉತ್ತರ ಗೋವಾದ ಮೊರ್ಜಿಮ್ ನಲ್ಲಿ ಬೆತ್ತಲೆ ಪಾರ್ಟಿ ನಡೆಯುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಪೋಸ್ಟರ್ ಒಂದು ವೈರಲ್ ಆಗಿ ಸಾಕಷ್ಟು ಚರ್ಚೆಗೆ ಅದು ದಾರಿ ಮಾಡಿಕೊಟ್ಟಿದೆ. “ಪ್ರೈವೇಟ್ ಗೋವಾ ಪಾರ್ಟಿ” ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೂಡಲೇ ಇದರ ಬಗ್ಗೆ ಚುರುಕಾದ ಕಾರ್ಯಾಚರಣೆಗೆ ಮುಂದಾಗಿದ್ದಾರೆ ಗೋವಾದ ಪೊಲೀಸರು. ಈ ಪಾರ್ಟಿಯು ಎಲ್ಲಿ ನಡೆಯಲಿದೆ ಎಂಬ ಸ್ಪಷ್ಟ ಮಾಹಿತಿಯನ್ನು ಕಲೆ ಹಾಕಲು, ಅದರ ವಿರುದ್ಧ ಕ್ರಮ ಕೈಗೊಳ್ಳಲು ಗೋವಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಪೋಲಿಸರು ತಮ್ಮ ಮಾಹಿತಿ ಜಾಲವನ್ನು ಚುರುಕುಗೊಳಿಸಿದ್ದಾರೆ ಎನ್ನಲಾಗಿದೆ.

ಗೋವಾದಲ್ಲಿ ಪಾರ್ಟಿ ನಡೆಯುವ ಸಾಧ್ಯತೆ ಇರುವ ಕುರಿತು ಉತ್ತರ ಗೋವಾ ಜಿಲ್ಲೆಯ ಮೂರು ರಸ್ತೆಗಳ ಬಗ್ಗೆ ಉಲ್ಲೇಖ ಮಾಡಲಾಗಿದೆಯೇ ಹೊರತು ಎಲ್ಲಿ ಎಂಬ ನಿಖರವಾದ ವಿಳಾಸವನ್ನಾಗಲೀ ಅಥವಾ ದಿನಾಂಕವನ್ನಾಗಲೀ ಪೋಸ್ಟರ್‍ನಲ್ಲಿ ನಮೂದಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದು, ಈ ಬೆತ್ತಲೆ ಪಾರ್ಟಿಯಲ್ಲಿ ವಿದೇಶಿಯರು ಹಾಗೂ ಕೆಲವು ಭಾರತೀಯ ಹುಡುಗಿಯರು ಇರಲಿದ್ದಾರೆ ಎನ್ನಲಾಗಿದ್ದು, ಪೋಲಿಸರು ಮಾತ್ರ ರಾಜ್ಯದಲ್ಲಿ ಯಾವುದೇ ಬೆತ್ತಲೇ ಪಾರ್ಟಿ ನಡೆಯಲು ನಾವು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ವಿಷಯ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆ, ಗೋವಾ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಮಾ ಕೌಂಟಿನ್ಹೋ ಅವರು ಈ ಕುರಿತಾಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಗೂ ಪ್ರವಾಸೋದ್ಯಮ ಸಚಿವ ಮನೋಹರ್ ಅಜ್ಗಾಂವ್ಕರ್ ಕೂಡಲೇ ಮಧ್ಯೆ ಪ್ರವೇಶಿಸಿ ಅಂತಹ ಯಾವುದೇ ಪಾರ್ಟಿಗಳು ನಡೆಯದಂತೆ ಸೂಕ್ತವಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here