ರಾಹುಲ್ ದ್ರಾವಿಡ್ ಸಾರಥ್ಯದ ಟೀಂ ಇಂಡಿಯಾ ನಾಲ್ಕನೇ ಬಾರಿಗೆ ವಿಶ್ವಕಪ್ ಮುಡಿಗೇರಿಸಿಕೊಂಡಿದೆ.ಇಂದು ನ್ಯೂಜಿಲೆಂಡ್ ನ ಓವಲ್ ನಲ್ಲಿ ನಡೆದ ಅಂಡರ್ 19 ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಯುವಕರು ಆಸ್ಟ್ರೇಲಿಯಾ ತಂಡದ ವಿರುದ್ದ ಭರ್ಜರಿ ಜಯ ದಾಖಲಿಸಿದ್ದಾರೆ.ಕಾಂಗರೂಗಳ ಬೆವರಿಳಿಸಿದ ಭಾರತದ ಯುವ ಕ್ರಿಕೆಟಿಗರು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದಾರೆ

ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 217 ರನ್ ಗಳಿಗೆ ಸರ್ವಪತನ ಕಂಡಿತು ನಂತರ ಸಾಧಾರಣ ರನ್ ಗಳ ಬೆನ್ನಟ್ಟಿದ ಭಾರತ ಮನೋಜ್ ಕಾರ್ಲಾ ಅವರ ಆಕರ್ಷಕ ಶತಕದ 102 ರನ್ 101 ಎಸೆತ 8 ಬೌಂಡರಿ 3 ಸಿಕ್ಸರ್ ನೆರವಿನಿಂದ ಆಸ್ಟ್ರೇಲಿಯಾ ತಂಡವನ್ನು ಎಂಟು ವಿಕೆಟ್ ಗಳ ಅಂತರದಿಂದ ಬಗ್ಗು ಬಡಿಯಿತು.ಭಾರತದ ಬೌಲರ್‌ಗಳು ನಡೆಸಿದ ದಾಳಿಗೆ ಕಾಂಗರೂಗಳು ತಬ್ಬಿಬ್ಬದಾರು. ಪೃಥ್ವಿ ಶಾ ನಾಯಕತ್ವದ ಟೀಂ ಇಂಡಿಯಾ ಗೆಲುವಿನಲ್ಲಿ ಟೀಂ ಇಂಡಿಯಾದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಪಾತ್ರ ಪ್ರಮುಖ ಪಾತ್ರ ವಹಿಸಿತ್ತು.ನಾಲ್ಕನೇ ಬಾರಿ ಅಂಡರ್ 19 ಭಾರತ ತಂಡ ವಿಶ್ವಕಪ್ ಮುಡಿಗೇರಿಸಿಕೊಂಡಿದೆ.2000, 2008,2012 ರಲ್ಲಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದಿತ್ತು

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here