ಭಾರತ ದೇಶ ಕಂಡ ಉತ್ತಮ‌ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದೇಶದ ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ಮುಖಂಡ ಅಟಲ್​ ಬಿಹಾರಿ ವಾಜಪೇಯಿ ಸೋಮವಾರ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯ ವಾಜಪೇಯಿ ಅವರನ್ನು ಕಾಡುತ್ತಿತ್ತು.93 ವರ್ಷದ ವಾಜಪೇಯಿ ಕಳೆದ ಕೆಲ ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ನೆನಪಿನ ಶಕ್ತಿಯನ್ನೂ ವಾಜಪೇಯಿ ಕಳೆದುಕೊಂಡಿದ್ದರು ಎನ್ನಲಾಗಿತ್ತು. ಇದೇ ಹಿನ್ನಲೆಯಲ್ಲಿ ವಾಜಪೇಯಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

ದೇಶದ ಜನಪ್ರಿಯ ಪ್ರಧಾನಿಗಳಲ್ಲಿ ವಾಜಪೇಯಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಜತೆಗೆ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಕಾಯಕಗಳಿಗೆ ಜೀವ ನೀಡುವ ಮೂಲಕ, ಜನಪರ ನಾಯಕ ಎಂಬ ಹೆಸರು ಪಡೆದಿದ್ದರು.ಸದ್ಯ ಏಮ್ಸ್ ವೈದ್ಯಾಧಿಕಾರಿಳು ವಾಜಪೇಯಿ ಅವರ ಆರೋಗ್ಯ ತಪಾಸಣೆ ಮಾಡುತ್ತಿದ್ದು, ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಚೇತರಿಕೆ ಕಂಡುಬಂದಿದೆ ಎಂಬ ಮಾಹಿತಿ ದೊರೆತಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here