Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

INDvsSA: ಇಂದಿನಿಂದ ಭಾರತ, ದಕ್ಷಿಣ ಆಫ್ರಿಕಾ ನಡುವೆ ಟಿ20 ಸರಣಿ ಆರಂಭ

ಡರ್ಬನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಭಾಗವಾಗಿ ಇಂದು (ಭಾರತೀಯ ಕಾಲಮಾನ 7:30ಕ್ಕೆ) ಮೊದಲ ಪಂದ್ಯದ ನಡೆಯಲಿದೆ. ದಕ್ಷಿಣ ಆಫ್ರಿಕಾದ ಕಿಂಗ್ಸ್‌ಮೀಡ್ ಡರ್ಬನ್‌ನಲ್ಲಿ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಭಾರತದ ಟಿ20 ತಂಡಕ್ಕೆ ಶುಭ್ಮನ್ ಗಿಲ್ ಮರಳಿದ್ದು, ಋತುರಾಜ್ ಗಾಯಕ್ವಾಡ್ ಜೊತೆಗೆ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಲ್ಲದೇ ಮೊಹಮ್ಮದ್ ಸಿರಾಜ್ ಭಾರತೀಯ ಬೌಲಿಂಗ್‌ ದಾಳಿಯನ್ನು ಮುನ್ನಡೆಸುವ ನಿರೀಕ್ಷೆಯಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ಟಿ20 ಕ್ರಿಕೆಟ್‌ನಲ್ಲಿ 24 ಬಾರಿ ಮುಖಾಮುಖಿಯಾಗಿದ್ದು, ಅಲ್ಲಿ ಭಾರತ 13 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 10 ಗೆದ್ದಿದೆ. ಒಂದು ಪಂದ್ಯ ಅನಿರ್ದಿಷ್ಟವಾಗಿ ಉಳಿಯಿತು. ತಂಡಗಳು ಇಂತಿವೆ ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್‌, ಶುಭಮನ್ ಗಿಲ್, ಋತುರಾಜ್ ಗಾಯಕವಾಡ್, ತಿಲಕ್‌ ವರ್ಮಾ, ರಿಂಕು ಸಿಂಗ್, ಶ್ರೇಯಸ್‌ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜ (ಉಪನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮರ್ ಮತ್ತು ದೀಪಕ್ ಚಾಹರ್. ದಕ್ಷಿಣ ಆಫ್ರಿಕಾ: ಏಡನ್ ಮರ್ಕರಂ (ನಾಯಕ), ಒಟ್ನೆಯಿಲ್ ಬಾರ್ತ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕೆ, ನ್ಯಾಂಡ್ರೆ ಬರ್ಗರ್‌, ಜೆರಾಲ್ಡ್ ಕೋಜಿ, ಡೊನವಾನ್ ಫೆರೀರಾ, ರೀಝಾ ಹೆಂಡ್ರಿಕ್ಸ್‌, ಮಾರ್ಕೊ ಜಾನ್ಸನ್‌, ಹೆನ್ರಿಚ್‌ ಕ್ಲಾಸೆನ್, ಕೇಶವ ಮಹಾರಾಜ್, ಡೇವಿಡ್ ಮಿಲ್ಲರ್, ಆಂಡಿಲೆ ಪಿಶುವಾಯೊ, ತಬ್ರೇಜ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್‌ ಮತ್ತು ಲಿಝಾರ್ಡ್‌ ವಿಲಿಯಮ್ಸ್‌.