ನೆರೆಯ ಆಂಧ್ರಪ್ರದೇಶದಲ್ಲಿ ಎಲ್ಲ ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮಗಳನ್ನಾಗಿ ಪರಿವರ್ತಿಸುವ ಕುರಿತು ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಚಿಂತನೆಯೊಂದನ್ನು ನಡೆಸಿದ್ದು,ಇದಕ್ಕೆ ಅಲ್ಲಿನ ನಾಯಕರೆನಿಸಿರುವ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ, ರಾಜಕಾರಣಿ ಪವನ್ ಕಲ್ಯಾಣ್ ಹಾಗೂ ಇನ್ನೂ ಅನೇಕರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಈ ವಿಷಯವಾಗಿ ವಿಜಯವಾಡದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ವೇಳೆ ಜಗನ್ ವಿರೋಧಿಸಿದವರಿಗೆ ತಮ್ಮ ಪ್ರಶ್ನೆಯ ಮೂಲಕ ತಿರುಗೇಟು ನೀಡಿದ್ದಾರೆ.

ಅವರು ಮಾತನಾಡುತ್ತಾ ಇಂದು ನಾವು ಜಗತ್ತಿನೊಂದಿಗೆ ಸ್ಪರ್ಧಿಸುತ್ತಿದ್ದೇವೆ. ಇಂಗ್ಲಿಷ್ ಇಲ್ಲದೆ ಒಬ್ಬರು ಸ್ಪರ್ಧಾತ್ಮಕ ಜಗತ್ತಿನ್ನು ಎದುರಿಸಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು, ನಮ್ಮ ಮಕ್ಕಳು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಕಲಿಯಬೇಕು, ನಮ್ಮ ಎಲ್ಲಾ ಶಾಲೆಗಳು ಇಂಗ್ಲಿಷ್ ಮಾಧ್ಯಮದಲ್ಲಿರಬೇಕು ಎಂದು ನಾನು ಪ್ರಯತ್ನಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಇದನ್ನು ವಿರೋಧಿಸಿ ಹೇಳಿಕೆ ನೀಡಿದವರನ್ನು ಕೂಡಾ ಪ್ರಶ್ನೆ ಮಾಡಿದ್ದಾರೆ.‌

ಜಗನ್ ಅವರು ಚಂದ್ರಬಾಬು ನಾಯ್ಡು ಅವರನ್ನು ನಿಮ್ಮ ಮಗ ಯಾವ ಮೀಡಿಯಂ ನಲ್ಲಿ ಅಧ್ಯಯನ ಮಾಡಿದ್ದಾರೆ? ನಿಮ್ಮ ಮೊಮ್ಮಗ ಯಾವ ಮಾದ್ಯಮದಲ್ಲಿ ಅಧ್ಯಯನ ಮಾಡುತ್ತಾನೆ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ವೆಂಕಯ್ಯ ನಾಯ್ಡು ಮತ್ತು ಪವನ್ ಕಲ್ಯಾಣ್ ಅವರನ್ನು ಕೂಡಾ ಇದೇ ರೀತಿಯ ಪ್ರಶ್ನೆಯನ್ನು ಮಾಡಿದ್ದಾರೆ. ಆ ಮೂಲಕ ಅವರು ಸರ್ಕಾರಿ ಶಾಲೆಗಳನ್ನು ಇಂಗ್ಲೀಷ್ ಮಾದ್ಯಮ ಶಾಲೆಗಳನ್ನಾಗಿ ಪರಿವರ್ತಿಸುವ ತಮ್ಮ ನಿಲುವಿನ ಪರ ಮಾತನಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here