ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಜನಾರ್ದನ ಪೂಜಾರಿಯವರಿಗೆ ಕೊರೊನಾ ಸೋಂಕು ಇರುವ ವಿಚಾರವನ್ನು ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಆದಂತಹ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದು ಬೇಗ ಗುಣಮುಖರಾಗುವಂತೆ ಜನಾರ್ಧನ ಪೂಜಾರಿಯವರಿಗೆ ಸಂದೇಶ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಬಿ ಜನಾರ್ದನ ಪೂಜಾರಿ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಚಾರ ತಿಳಿದು ಬೇಸರವಾಯಿತು. ಪೂಜಾರಿ ಅವರು ಶೀಘ್ರ ಗುಣಮುಖರಾಗಲೆಂದು ನಾನು ಹಾರೈಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here