ಬಳ್ಳಾರಿ ಭೇಟಿಗೆ ಗಾಲಿ‌ಜನಾರ್ಧನ ರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್  ಸಮ್ಮತಿ ನೀಡಿದೆ. ಹೌದು
೬ ವರ್ಷದ ಬಳಿಕ ತವರಿಗೆ ಗಣಿಧಣಿ ಜನಾರ್ದನ ರೆಡ್ಡಿ ಬರುತ್ತಿದ್ದಾರೆ. ಜನಾರ್ದನ ರೆಡ್ಡಿ ಅವರು ಬಳ್ಳಾರಿಯಿಂದ ಗೆದ್ದು ಸಚಿವರಾಗಿದ್ದವರು . ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದಿರುವ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿಗೆ ತಮ್ಮ ತವರು ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಹಾಗಾಗಿ ೬ ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜನಾರ್ದನ ರೆಡ್ಡಿ ಬಳ್ಳಾರಿಗೆ ತೆರಳಲು ಅವಕಾಶ ದೊರೆತಂತಾಗಿದೆ.

ಜನಾರ್ದನ ರೆಡ್ಡಿ ಅವರ ಮಾವ ಪಾರ್ಶ್ವವಾಯುವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಸುಪ್ರಿಂ ಕೋರ್ಟ್ ರಜಾಕಾಲದ ಪೀಠ ಅನುಮತಿ ನೀಡಿದೆ. ಜೂನ್ ೮ರಿಂದ ೨ ವಾರಗಳ ಕಾಲ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.  ಅಕ್ರಣ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರೆಡ್ಡಿ ೨೦೧೫ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.

ಆದರೆ ರೆಡ್ಡಿ ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ ಎಂದು ಕೋರ್ಟ್ ಆದೇಶಿಸಿತ್ತು. ಇದೇ ವೇಳೆ ಆರು ವರ್ಷವಾದರೂ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸದ ಕಾರಣಕ್ಕೆ ಸಿಬಿಐ ಅಧಿಕಾರಿಗಳ ವಿರುದ್ಧವೂ ಸುಪ್ರೀ ಕೋರ್ಟ್ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here