ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಆಗಾಗ ಒಬ್ಬರ ವಿರುದ್ಧ ಮತ್ತೊಬ್ಬರು ವಾಗ್ದಾಳಿ ನಡೆಸುವುದು ಇತ್ತೀಚಿನ ದಿನಗಳಲ್ಲಿ ಮಾದ್ಯಮಗಳ ಮುಖ ಪುಟಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಆದರೆ ಇದಕ್ಕೆ ಭಿನ್ನವಾಗಿ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೊಂದು ಬಾರಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಕಾಣಿಸಿಕೊಂಡು ಜನರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಾಜಕೀಯವಾಗಿ ಸದಾ ಕಾಲೆಳೆಯುವ ಜೆಡಿಎಸ್, ಬಿಜೆಪಿ ನಾಯಕರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣುವುದು ಎಲ್ಲರಲ್ಲೂ ಆಶ್ಚರ್ಯವನ್ನು ಉಂಟು ಮಾಡಿದೆ.

ಮಾನ್ಯ ಬಿಜೆಪಿ ಸಂಸದರಾದ ಪ್ರತಾಪ್ ಸಿಂಹ ಹಾಗೂ ಜೆಡಿಎಸ್ ನ ಸಚಿವ ಜಿ.ಟಿ ದೇವೇಗೌಡ ಅವರು ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರು ಜೊತೆಯಾಗಿ ಕಂಡು ಎಲ್ಲೆಡೆ ಸುದ್ದಿಯಾಗುತ್ತಿದ್ದಾರೆ. ಮೈಸೂರು ತಾಲೂಕಿನ ಮರಟಿ ಕ್ಯಾತನಹಳ್ಳಿಯಲ್ಲಿ ನಡೆದಂತಹ ಗ್ರಾಮ ಪಂಚಾಯತ್ ಕಟ್ಟಡದ ಶಂಕುಸ್ಥಾಪನೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಟನಾ ಸಮಾರಂಭದಲ್ಲಿ ಈ ಇಬ್ಬರೂ ನಾಯಕರು ಭಾಗವಹಿಸಿ ಎಲ್ಲರ ಕುತೂಹಲವನ್ನು ಕೆರಳಿಸಿದ್ದಾರೆ ಪ್ರತಾಪ್ ಸಿಂಹ ಹಾಗೂ ಜಿ.ಟಿ.ದೇವೆಗೌಡ ಅವರು.

ಕಾರ್ಯಕ್ರಮದ ನಂತರ ಇಬ್ಬರೂ ತಾಲೂಕು ಪಂಚಾಯತ್ ನ ಸದಸ್ಯರಾದ, ಜೆಡಿಎಸ್ ನ ನಾಯಕರಲ್ಲಿ ಒಬ್ಬರ ಮನೆಯಲ್ಲಿ ಉಪಹಾರ ಸೇವಿಸಿದ್ದಾರೆ. ನಂತರ ಜಿಟಿಡಿ, ಪ್ರತಾಪ್ ಸಿಂಹ ಅವರು ಬೇರೆ ಬೇರೆ ಕಾರಿನ ಬದಲಾಗಿ ಒಂದೇ ಕಾರಿನಲ್ಲಿ ಸಂಚರಿಸಿರುವುದು ಕೂಡಾ ಒಂದೆಡೆ ಚರ್ಚೆಗೆ ಕಾರಣವಾಗಿದೆ. ಇದಕ್ಕೂ‌ ಮೊದಲು ಒಮ್ಮೆ ಒಂದೇ ಕಾರಿನಲ್ಲಿ ಪ್ರತಾಪ್ ಸಿಂಹ, ಜಿ.ಟಿ ದೇವೇಗೌಡ ಹಾಗೂ ಸಚಿವ ಸಾ.ರಾ.ಮಹೇಶ್ ಜೊತೆಯಾಗಿ ಓಡಾಟ ನಡೆಸಿದಾಗಲೂ ಇಂತಹುದೇ ಒಂದು ಆಶ್ಚರ್ಯ ಹಲವರಿಗೆ ಉಂಟಾಗಿತ್ತು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here