ನವದೆಹಲಿ,ಸೆ.: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಮೈತ್ರಿ ಗೊಂದಲ್ಲಕ್ಕೆಇಂದು ಕೊನೆಗೂ ತೆರೆ ಎಳೆಯಲಾಗಿದ್ದು, ಜೆಡಿಎಸ್ ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದೆ. ದೆಹಲಿಯಲ್ಲಿಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, ಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲ ವಿಚಾರ ಚರ್ಚೆ ನಡೆಸಿದ್ದೇವೆ. ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ