ಕೊರೊನಾ ವೈರಸ್‍ನಿಂದ ಜಗತ್ತಿನಾದ್ಯಂತ ಹಲವಾರು ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ಜನರ ಭೀತಿಯಿಂದ ಬದುಕುವ ಪರಿಸ್ಥಿತಿ ಎದುರಾಗಿದೆ. ಆ ಜನರಿಗಾಗಿ, ಕೊರೊನಾ ವಿರುದ್ಧದ ಹೋರಾಟಕ್ಕೆ ಅನೇಕರು ದೇಣಿಗೆಯನ್ನು ನೀಡಲು ಮುಂದಾಗಿದ್ದಾರೆ. ಇದೀಗ ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಮಹಿಳೆಯೊಬ್ಬರು ತಮ್ಮ ಹಜ್ ತೀರ್ಥಯಾತ್ರೆಗಾಗಿ ತಾನು ಕೂಡಿಟ್ಟಿದ್ದ 5 ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ.
ಖಲೀದಾ ಬೇಗಂ (87) ಹೆಸರಿನ ಹಿರಿಯ ಮಹಿಳೆ ಹಜ್ ತೀರ್ಥಯಾತ್ರೆಗಾಗಿ ತಾನು ಕೂಡಿಟ್ಟಿದ್ದ 5 ಲಕ್ಷ ರೂ. ಹಣವನ್ನು ಆರ್‌ಎಸ್‌ಎಸ್ ಅಂಗಸಂಸ್ಥೆಯಾದ ‘ಸೇವಾ ಭಾರತಿ’ಗೆ ದೇಣಿಗೆಯಾಗಿ ನೀಡಿದ್ದಾರೆ.

ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿರುವ ಕಾರಣ ಹಜ್ ತೀರ್ಥಯಾತ್ರೆಯನ್ನು ಮುಂದಕ್ಕೆ ಹಾಕಿದ್ದಾರೆ ಖಲೀದಾ ಬೇಗಂ ಅವರು. ಈಕೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಫಾರೂಖ್ ಖಾನ್ ಅವರ ತಾಯಿಯಾಗಿದ್ದಾರೆ. ಮುಸ್ಲಿಮರ ಪವಿತ್ರ ಸ್ಥಳವಾದ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ವಾರ್ಷಿಕ ಹಜ್ ತೀರ್ಥಯಾತ್ರೆ ನಡೆಯುತ್ತದೆ.
ಕೊರೊನಾ ವೈರಸ್‍ನಿಂದ ದೇಶದಲ್ಲೆಡೆ ಅನೇಕ ಕೂಲಿ ಕಾರ್ಮಿಕರು, ದಿನಗೂಲಿ ಕೆಲಸಗಾರರು ಮಾಡಲು ಊಟವಿಲ್ಲದೆ ಪರದಾಡುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೂಡಾ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ.

ಇಂತಹ ಕ್ಲಿಷ್ಟಕರ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವಾ ಭಾರತಿ ಇಂತಹ ಸಂಕಷ್ಟದಲ್ಲಿರುವ ಕಾರ್ಮಿಕರ ನೆರವಿಗೆ ಮುಂದೆ ಬಂದಿದೆ. ಅವರಿಗೆ ಊಟ, ನೀರು, ಆಶ್ರಯವನ್ನು ನೀಡುವ ಕಾರ್ಯದಲ್ಲಿ ನಿರತವಾಗಿದೆ. ಇದರ ಬಗ್ಗೆ ತಿಳಿದ ಖಲೀದಾ ಬೇಗಂ ಅವರ ಕಾರ್ಯವನ್ನು ಮೆಚ್ಚಿ, ಅವರಿಗೆ ತನ್ನಿಂದ ಆಗುವ ನೆರವನ್ನು ನೀಡಬೇಕೆಂದು ಆಕೆ ಸಂಸ್ಥೆಗೆ 5 ಲಕ್ಷ ರೂ. ದೇಣಿಗೆ ನೀಡಲು ನಿರ್ಧರಿಸಿದರೆಂದು ಆರ್.ಎಸ್.ಎಸ್. ಮಾಧ್ಯಮ ವಿಭಾಗ ಇಂದ್ರಪ್ರಸ್ಥ ವಿಶ್ವ ಸಂವಾದ ಕೇಂದ್ರದ ಮುಖ್ಯಸ್ಥ ಅರುಣ್ ಆನಂದ್ ಅವರು ತಿಳಿಸಿದ್ದಾರೆ.‌

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here