ರಾಷ್ಟ್ರೀಯ ಹಿಂದಿ ದಿವಸ್ ಆಚರಣೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಿಂದಿ ಭಾಷೆಯ ಬಗ್ಗೆ ನೀಡಿದ ಒಂದು ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಇಂದು ತುಮಕೂರು ನಗರದ ವೀರಶೈವ ಗುರುಕುಲ ವಿದ್ಯಾರ್ಥಿ ನಿಲಯದಲ್ಲಿ ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದಿಂದ ಹಮ್ಮಿಕೊಂಡಿದ್ದ ದಶಮಾನೋತ್ಸವ ಸಮಾರಂಭದಲ್ಲಿ ಮಾಧುಸ್ವಾಮಿ ಭಾಗವಹಿಸಿದ ಸಂದರ್ಭದಲ್ಲಿ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಪ್ರತಿಕ್ರಿಯೆಯೊಂದನ್ನು ನೀಡಿದ್ದಾರೆ. ಅವರು ತಮ್ಮ ಮಾತಿನಲ್ಲಿ ಹಿಂದಿ ಹೇರಿದ್ರೆ ಯಾರೂ ಸಹಿಸಿಕೊಳ್ಳಲ್ಲ. ನಾವು ಕನ್ನಡ ಅಭಿಮಾನಿಗಳು, ಕನ್ನಡ ಭಾಷೆ ಮೇಲೆ ಪ್ರಹಾರ ಮಾಡಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅನಂತರ ಮಾಧುಸ್ವಾಮಿ ಅವರು ಅಮಿತ್ ಶಾ ಅವರ ಹೇಳಿಕೆಗೆ ಸಮಜಾಯಿಷಿ ಕೂಡಾ ನೀಡಿದ್ದಾರೆ. ಅಮಿತ್ ಶಾ ಅವರು ರಾಷ್ಟ್ರಕ್ಕೊಂದು ಭಾಷೆ ಬೇಕು ಎಂಬರ್ಥದಲ್ಲಿ ಹೇಳಿದ್ದು, ಅವರು ಹಿಂದಿ ಭಾಷೆಯ ಹೇರಿಕೆಯ ಬಗ್ಗೆ ಮಾತನಾಡಿಲ್ಲ ಎಂದಿದ್ದಾರೆ.

ಅಲ್ಲದೆ ಅವರು ಹೇಳಿರುವುದು ದೇಶಕ್ಕೊಂದು ಸ್ವಂತ ಭಾಷೆ ಬೇಕು, ಪರಕೀಯ ಭಾಷೆಗೆ ಒಳಗಾಗಬಾರದು ಎಂದಿದ್ದಾರಷ್ಟೆ, ಎಂಬುದಾಗಿ ಶಾ ಹೇಳಿಕೆಯನ್ನು ಮಾಧುಸ್ವಾಮಿ ಅವರು ಸಮರ್ಥಿಸಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಟ್ರಾಫಿಕ್ ದಂಡ ಪರಿಷ್ಕರಣೆ ಬಗ್ಗೆ ಕೂಡಾ ಮಾತನಾಡಿದ್ದು, ಬರುವ ಮೂರ್ನಾಲ್ಕು ದಿನಗಳಲ್ಲಿ ದಂಡ ಪರಿಷ್ಕರಣೆ ಆಗುತ್ತದೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ ಮಧ್ಯಂತರ ಮಧ್ಯಂತರ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆಯ ಬಗ್ಗೆ ಅವರು ಒಳ್ಳೆ ವಿದ್ಯಾರ್ಥಿಗಳಿದ್ದಂತೆ, ದಿನವೂ ಓದುವ ಅವರು ಪರೀಕ್ಷೆಗೆ ಸಿದ್ಧವಾಗುತ್ತಿದ್ದಾರೆ ಮಾಡಲಿ ಬಿಡಿ ಎಂದು ವ್ಯಂಗ್ಯವಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here