ಬೆಂಗಳೂರು: ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲೂ ಸದ್ದು ಮಾಡಿರುವಂತಹ ಕಾಂತರ ಚಿತ್ರವು ಇಡೀ ದೇಶದ ಜನ ನಮ್ಮ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವ ಹಾಗೆ ಮಾಡಿದೆ. ಬಾಕ್ಸ್ ಆಫೀಸಲ್ಲಿ ಬಹಳ ಸದ್ದು ಮಾಡಿದ ಕಾಂತರಾ ಚಿತ್ರ ಗೋವಾ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
ಹೌದು, ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ನವೆಂಬರ್ 20 ರಿಂದ 28ರವರೆಗೆ ಗೋವಾದಲ್ಲಿ ನಡೆಯಲಿರುವ ಸಿನಿಮೋತ್ಸವದಲ್ಲಿ ಈ ಸಿನಿಮಾ ಪ್ರದರ್ಶನಗೊಳ್ಳಲಿದೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.