ಕರ್ನಾಟಕದ 15 ಕ್ಷೇತ್ರಗಳಿಗೆ ಉಪಚುನಾವಣೆ ಡೇಟ್ ಫಿಕ್ಸ್ ಆಗಿದೆ. 15 ಕ್ಷೇತ್ರಗಳಲ್ಲಿ ಶಾಸಕರು ರಾಜೀನಾಮೆ ನೀಡಿದ್ದರಿಂದ ಬೈ ಎಲೆಕ್ಷನ್ ನಡೆಯಬೇಕಿತ್ತು ಇದೀಗ ಕರ್ನಾಟಕದ ಹದಿನೈದು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವ ದಿನಾಂಕ ನಿಗದಿಯಾಗಿದೆ.
ಕಳೆದ ಮೂರು ತಿಂಗಳ ಹಿಂದೆ ಮೈತ್ರಿ ಸರ್ಕಾರ ಇದ್ದ ಸಮಯದಲ್ಲಿ ಹದಿನೇಳು  ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಹದಿನೈದು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ನಂತರದ ದಿನಗಳಲ್ಲಿ ರಾಜೇನಾಮೆ ನೀಡಿದ್ದ ಶಾಸಕರನ್ನು ಶಾಶಕ ಸ್ಥಾನದಿಂದ ಸ್ಪೀಕರ್ ರಮೇಶ್ ಕುಮಾರ್ ಅವರು ವಜಾಗೊಳಿಸಿದ್ದರು. ಆಗ ಅನರ್ಹ ಶಾಸಕರು ಕೋರ್ಟ್ ಮೊರೆ ಹೋಗಿದ್ದರು.

ಆದರೆ ಪ್ರಕರಣ ಇನ್ನು ನ್ಯಾಯಾಲಯದಲ್ಲಿ ಇದ್ದು ಅನರ್ಹಶಾಸಕರಿಗೆ ಇದೀಗ ಟೆನ್ಶನ್ ಹೆಚ್ಚಾಗಿದೆ. ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದ್ದು ಅಕ್ಟೋಬರ್ 24 ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು ಹದಿನೇಳು ಕ್ಷೇತ್ರಗಳು ಈಗ ಖಾಲಿ ಇದ್ದು ಎರಡು ಕ್ಷೇತ್ರಗಳಲ್ಲಿ ನ್ಯಾಯಾಲಯ ತಡೆ ಇದ್ದು ಹದಿನೈದು ಕ್ಷೇತ್ರಗಳ ಉಪಚುನಾವಣೆ ಅಕ್ಟೋಬರ್ 21 ರಂದು ನಡೆಯಲಿದೆ.

ಇನ್ನೂ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಅಕ್ಟೋಬರ್4 ಕೊನೆಯ ದಿನವಾಗಿದೆ. ಇನ್ನು ಇದೇ ಸೋಮವಾರ ಅನರ್ಹ ಶಾಸಕರ ಬಗ್ಗೆ ನ್ಯಾಯಾಲಯ ತೀರ್ಪು ಪ್ರಕಟಿಸುವ ಸಾಧ್ಯತೆ ಇದ್ದು ಸೋಮವಾರದ ತೀರ್ಪಿನ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ರಾಜರಾಜೇಶ್ವರಿ ನಗರ  ಮತ್ತು ಮಸ್ಕಿ  ಕ್ಷೇತ್ರಗಳಿಗೆ ಇನ್ನೂ ಚುನಾವಣೆಯ ದಿನಾಂಕ ನಿಗದಿಯಾಗಿಲ್ಲ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here