ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಅನರ್ಹ ಶಾಸಕರಿಗೆ ದೊಡ್ಡ ಶಾಕ್‌ ನೀಡಿದಂತಾಗಿದೆ. ಸೆಪ್ಟೆಂಬರ್‌ 23 ಕ್ಕೆ ಅಧಿಸೂಚನೆ ಹೊರಬೀಳಲಿದ್ದು, 15 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ದಿನದಲ್ಲಿ ಅಂದರೆ ಅಕ್ಟೋಬರ್‌ 21 ಕ್ಕೆ ಮತದಾನ ನಡೆಯಲಿದೆ. ಅಕ್ಟೋಬರ್‌ 24 ಕ್ಕೆ ಫಲಿತಾಂಶ ಹೊರ ಬೀಳಲಿದೆ. ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ಇನ್ನೂ ಆರಂಭವಾಗದಿರುವ ಕಾರಣ ತಮ್ಮ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದ್ದು, ಆದರೆ ಚುನಾವಣಾ ಆಯೋಗ ಇದಕ್ಕೆ ಮಾನ್ಯತೆ ನೀಡಿಲ್ಲ.ಇನ್ನೂ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಅಕ್ಟೋಬರ್4 ಕೊನೆಯ ದಿನವಾಗಿದೆ.

ಇನ್ನು ಇದೇ ಸೋಮವಾರ ಅನರ್ಹ ಶಾಸಕರ ಬಗ್ಗೆ ನ್ಯಾಯಾಲಯ ತೀರ್ಪು ಪ್ರಕಟಿಸುವ ಸಾಧ್ಯತೆ ಇದ್ದು ಸೋಮವಾರದ ತೀರ್ಪಿನ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಎರಡು ಕ್ಷೇತ್ರಗಳ ಚುನಾವಣೆಗೆ ನ್ಯಾಯಾಲಯದ ತಡೆಯಾಜ್ಞೆ ಇರುವ ಕಾರಣ ಆ ಕ್ಷೇತ್ರಗಳ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ. ಒಟ್ಟು 17 ಮಂದಿ ಶಾಸಕರುಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದು, ಅವರುಗಳ ವಿವರ ಇಂತಿದೆ.

ಗೋಕಾಕ್ ಕ್ಷೇತ್ರದ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ, ಅಥಣಿ ಕ್ಷೇತ್ರದ ಶಾಸಕರಾಗಿದ್ದ ಮಹೇಶ್ ಕುಮಟಳ್ಳಿ, ರಾಣೆಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್. ಶಂಕರ್, ಮಸ್ಕಿ ಕ್ಷೇತ್ರದ ಪ್ರತಾಪ್ ಗೌಡ ಪಾಟೀಲ್, ಯಶವಂತಪುರ ಕ್ಷೇತ್ರದ ಎಸ್.ಟಿ. ಸೋಮಶೇಖರ್, ಕೆ.ಆರ್. ಪುರ ಕ್ಷೇತ್ರದ ಬೈರತಿ ಬಸವರಾಜು, ಯಲ್ಲಾಪುರ ಕ್ಷೇತ್ರದ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಕ್ಷೇತ್ರದ ಬಿ.ಸಿ. ಪಾಟೀಲ್, ರಾಜರಾಜೇಶ್ವರಿ ನಗರ ಕ್ಷೇತ್ರದ ಮುನಿರತ್ನ, ಶಿವಾಜಿ ನಗರ ಕ್ಷೇತ್ರದ ರೋಷನ್ ಬೇಗ್, ಚಿಕ್ಕಬಳ್ಳಾಪುರ ಕ್ಷೇತ್ರದ ಡಾ. ಸುಧಾಕರ್, ಹೊಸಕೋಟೆ ಕ್ಷೇತ್ರದ ಎಂಟಿಬಿ ನಾಗರಾಜ್, ಹೊಸಪೇಟೆ-ವಿಜಯನಗರ ಕ್ಷೇತ್ರದ ಆನಂದ್ ಸಿಂಗ್ ಹಾಗೂ ಕಾಗವಾಡ ಕ್ಷೇತ್ರದ ಶ್ರೀಮಂತ ಪಾಟೀಲ್, ಮಹಾಲಕ್ಷ್ಮಿಲೇಔಟ್ ಕ್ಷೇತ್ರದ ಗೋಪಾಲಯ್ಯ, ಕೆ.ಆರ್. ಪೇಟೆ ಕ್ಷೇತ್ರದ ನಾರಾಯಣಗೌಡ ಹಾಗೂ ಹುಣಸೂರು ಕ್ಷೇತ್ರದ ಹೆಚ್. ವಿಶ್ವನಾಥ್ ರಾಜೀನಾಮೆ ನೀಡಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here