ಕರ್ನಾಟಕದಲ್ಲಿ ಕನ್ನಡವೇ ಮೊದಲ ಭಾಷೆ. ಕನ್ನಡದ ವಿಚಾರಕ್ಕೆ ಬಂದ್ರೆ ರಾಜಿಯಾಗೋ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಆ ಮೂಲಕ ದೇಶಕ್ಕೆ ಹಿಂದಿ ರಾಷ್ಟ್ರಭಾಷೆಯಾಗಬೇಕು ಅನ್ನೋ ಅಮಿತ್ ಶಾ ಟ್ವೀಟ್ ಗೆ ಸಿಎಂ ಗುದ್ದು ನೀಡಿದ್ದಾರೆ. ಇಂದು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ನಮ್ಮ ದೇಶದಲ್ಲಿರುವ ಎಲ್ಲ ಅಧಿಕೃತ ಭಾಷೆಗಳೂ ಸಮಾನ. ಕರ್ನಾಟಕಕ್ಕೆ ಸಂಬಧಿಸಿದಂತೆ ಕನ್ನಡ ಪ್ರಮುಖ ಭಾಷೆ. ಇವುಗಳ ವಿಷಯದಲ್ಲಿ ನಾವು ರಾಜಿಯಾಗುವುದಿಲ್ಲ. ಕನ್ನಡ ಮತ್ತು ನಮ್ಮ ರಾಜ್ಯದ ಸಂಸ್ಕೃತಿಯ ಉತ್ತೇಜನಕ್ಕೆ ನಾವು ಬದ್ಧ ಎಂದಿದ್ದಾರೆ.

ಹಿಂದಿ ದಿವಸ್ ಆಚರಣೆ ಸಂದರ್ಭದಲ್ಲಿ ಒಂದೇ ದೇಶ ಒಂದೇ ಭಾಷೆ ಅನ್ನೋ ವಿಚಾರವಾಗಿ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿದ್ದ ಟ್ವೀಟ್ ಗೆ ದೇಶದಾದ್ಯಂತ ಪ್ರತಿರೋಧ ವ್ಯಕ್ತವಾಗಿತ್ತು. ಭಾರತ ವಿವಿಧ ಭಾಷೆ ಮತ್ತು ಸಂಸ್ಕೃತಿಯ ರಾಷ್ಟ್ರ. ಹಿಂದಿ ಹೇರಿಕೆಯಿಂದ ಪ್ರಾದೇಶಿಕ ಭಾಷೆಗಳ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ ಎಂದು ಪ್ರಮುಖವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪ್ರತಿರೋಧ ವ್ಯಕ್ತವಾಗಿತ್ತು.

ಕರ್ನಾಟಕದಲ್ಲೂ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಸಿಎಂ ಕೂಡ ತಮ್ಮದೇ ಹೈಕಮಾಂಡ್ ನಿಲುವಿಗೆ ಸೆಡ್ಡು ಹೊಡೆದು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಭಾಷೆ ವಿಚಾರದಲ್ಲಿ ರಾಜಿ ಇಲ್ಲ ಎಂದು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here