ಎಲ್ಲರ ಚಿತ್ತ 15 ಕ್ಕೆ ಇರುವಾಗಲೇ ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ ನಡೆದಿದೆ.ಚುನಾವಣಾ ಕಾವು ಈಗಾಗಲೇ ಮುಗಿದಿದ್ದು,ಎಲ್ಲರೂ ಇದೀಗ ಫಲಿತಾಂಶಕ್ಕಾಗಿ ಕಾಯ್ತಿದ್ದಾರೆ. ಈಗಾಗಲೇ ಬಹುತೇಕ ಚುನಾವಣಾ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದಿದೆ. ಇದೇ ವರದಿಯನ್ನ ರಾಜ್ಯ ಗುಪ್ತಚರ ಇಲಾಖೆಯು ಕೂಡ ರಾಜ್ಯ ಸರ್ಕಾರಕ್ಕೆ ನೀಡಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಬರವುದಿಲ್ಲ. ಅತೀ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರಹೊಮ್ಮಲಿದೆ ಎಂದು ಗುಪ್ತಚರ ಇಲಾಖೆ ಸರ್ಕಾರಕ್ಕೆ ಮಾಹಿತಿ ನೀಡಿದೆ. ಕಾಂಗ್ರೆಸ್ ಪಕ್ಷಕ್ಕೆ 90 ರಿಂದ 95 ಸ್ಥಾನ, ಬಿಜೆಪಿಗೆ 85ರಿಂದ90 ಸ್ಥಾನ, ಜೆಡಿಎಸ್ 40 ರಿಂದ 45 ಸ್ಥಾನ ಸಿಗಲಿದೆ…ಇನ್ನು ಸಿಎಂ ಸಿದ್ದರಾಮಯ್ಯಗೆ ಎರಡು ಕ್ಷೇತ್ರದಲ್ಲಿ ಗೆಲ್ಲುವ ಸುಲಭ ಅಲ್ಲ ಎಂದು ಗುಪ್ತಚರ ಇಲಾಖೆಯ ವರದಿ ಮಾಹಿತಿ ನೀಡಿದೆ.ಅಲ್ದೇ ಕಾಂಗ್ರೆಸ್ ಜೊತೆ ಹೋಗಲು ಜೆಡಿಎಸ್ ಆಸಕ್ತಿಯಿದ್ದು,

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನೆ ಖರ್ಗೆಗೆ ದಲಿತ ಸಿಎಂ ಮಾಡುವ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ…ಗುಪ್ತಚರ ಇಲಾಖೆ ಮಾಹಿತಿ ಸಿಎಂ ಕೈಗೆ ಸಿಗುತ್ತಿದ್ದಂತೆ ಶಾಕ್ ಆಗಿದ್ದಾರೆ ಎನ್ನಲಾಗಿದೆ..ಇದೇ ಕಾರಣಕ್ಕಾಗಿ ಇಂದು ಬೆಳಿಗ್ಗೆ ಮೈಸೂರುನಲ್ಲಿ ದಲಿತ

ಸಿಎಂ ಮಾಡುವ ರೀತಿ ಇದ್ರೆ ನಾನು ಬಿಟ್ಟುಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ…ರಾಜ್ಯದಲ್ಲಿ ಅತಂತ್ರ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಇದೀಗ ಗುಪ್ತಚರ ಇಲಾಖೆ ವರದಿ ನೀಡಿರೋದ್ರಿಂದ,ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರ ರಚನೆ ಮಾಡುತ್ತೀನಿ ಎಂದು ಬೀಗುತ್ತಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ಗೆ ದೊಡ್ಡ ಶಾಕ್ ಆಗಿದೆ…

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here