ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳಿಗೆ ಈಗಾಗಲೇ ಮುಂದಾಗಿದೆ‌. ಮಾನ್ಯ ಮುಖ್ಯ ಮಂತ್ರಿ ಅವರೇ ಮುಂದಿನ ಒಂದು ವಾರ ಕಾಲ ರಾಜ್ಯದಲ್ಲಿ ಎಲ್ಲಾ‌ ಪಬ್ ಗಳು, ಮಾಲ್ ಗಳು, ಥಿಯೇಟರ್ ಗಳು, ಜಾತ್ರೆ, ಉತ್ಸವಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಬಾರದು ಎಂಬ ಸೂಚನೆಯನ್ನು ನೀಡಿದ್ದರು. ಈಗ ಅದೇ ರೀತಿಯಲ್ಲಿ ರಾಜ್ಯದಲ್ಲಿರುವ ಎಲ್ಲಾ‌ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಹಾಗೂ ಕಾಲೇಜುಗಳಿಗೆ ಶಿಕ್ಷಣ ಇಲಾಖೆ 15 ದಿನಗಳ ರಜೆಯನ್ನು ಘೋಷಣೆ ಮಾಡಿದೆ.

ಈ ವಿಚಾರವಾಗಿ ಕಾಲೇಜು ಶಿಕ್ಷಣ ನಿರ್ದೇಶಕರು ಸುತ್ತೋಲೆಯನ್ನು ಹೊರಡಿಸಿದ್ದು, ಕೊರೊನಾ ವೈರಸ್ ರೋಗವು ಸಾಂಕ್ರಾಮಿಕವಾಗಿ ಹರಡುತ್ತಿದ್ದು, ರಾಜ್ಯ ಸರ್ಕಾರ ಇದನ್ನು ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಲಾಖೆ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಹದಿನೈದು ದಿನಗಳ ಕಾಲ ರಜೆಯನ್ನು ಘೋಷಣೆ ಮಾಡಲಾಗಿದೆ.
ಮಾರ್ಚ್ 14 ರಿಂದ ಮಾರ್ಚ್ 28 ರವರೆಗೆ ರಜೆಯನ್ನು ನೀಡಲಾಗಿದೆ ಎಂದು ತಿಳಿಸಲಾಗಿದೆ.

ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಣೆ ಮಾಡಿದ್ದು, ಶಾಲಾ ಕಾಲೇಜುಗಳ ಕಛೇರಿ ಕೆಲಸಗಳು ಮಾತ್ರ ಎಂದಿನಂತೆ ನಡೆಯಲಿದೆ ಎಂದು ಕೂಡಾ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ರಜೆ ಕೇವಲ ಶಾಲಾ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗಿದ್ದು, ಕಛೇರಿ ಕೆಲಸಗಳು ಮಾತ್ರ ಸಾಮಾನ್ಯವಾಗಿ ನಡೆದುಕೊಂಡು ಹೋಗಲಿದೆ ಎಂದು ತಿಳಿಸಲಾಗಿದೆ. ಈ ಮೊದಲು ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿತ್ತು. ನಂತರ ಅದನ್ನು ಈಗ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೂಡಾ ವಿಸ್ತರಿಸಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here