ಕತಾರ್‌ನಲ್ಲಿರುವ ಕರ್ನಾಟಕ ಸಂಘ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ಸಾಹಿತಿಯಾದ ಎಸ್.ಎಲ್ ಭೈರಪ್ಪನವರಿಗೆ ಮತ್ತು ನಟ ಪುನೀತ್‍ ರಾಜ್‍ಕುಮಾರ್ ಅವರಿಗೆ ಬಿರುದು ನೀಡಿ ಸತ್ಕರಿಸಲಾಗಿದೆ. ಅಲ್ ವಕ್ರಾದ ಡಿ.ಪಿ.ಎಸ್.ಎ.ಐ.ಎಸ್. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಇಬ್ಬರೂ ಕನ್ನಡ ನಾಡಿನ ಗಣ್ಯರಿಗೆ 2019 ನೇ ಸಾಲಿನ `ಕತಾರ್ ಕನ್ನಡ ಸಮ್ಮಾನ್’ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರನ್ನು “ಕಲಾ ಸಾರ್ವಭೌಮ” ಬಿರುದಿನಿಂದ ಸನ್ಮಾನಿಸಲಾಗಿದೆ.

ಕಾರ್ಯಕ್ರಮದ ಮತ್ತೊಂದು ವಿಶೇಷವೆಂದರೆ ಪುನೀತ್ ದಂಪತಿ ಹಾಗೂ ಹಿರಿಯ ಸಾಹಿತಿ ಭೈರಪ್ಪ ಅವರನ್ನು ವಾದ್ಯಗೋಷ್ಠಿಯ ಮೆರವಣಿಗೆಯ ಮೂಲಕ ಸಭಾಂಗಣಕ್ಕೆ ಕರೆ ತರಲಾಯಿತು. ಈ ಸಂಘವು ಅಂಗೀಕೃತಗೊಂಡು 20 ವರ್ಷ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಟಿವಿ ನಟ ಹಾಗೂ ನಿರೂಪಕ ವಿಜಯೇಂದ್ರ ಅಥಣೀಕರ್ ನಿರೂಪಿಸಿದರೆ, ಹಿನ್ನೆಲೆ ಗಾಯಕರಾದ ಹರ್ಷಾ ಹಾಗೂ ಕು. ಮೈತ್ರಿ ಐಯ್ಯರ್ ಅವರು ಹಾಡಿನ ಮೂಲಕ ಎಲ್ಲರನ್ನು ರಂಜಿಸಿದ್ದಾರೆ.

ಅಲ್ಲದೆ ಕಾರ್ಯಕ್ರಮದಲ್ಲಿ ಡಾ. ಸಂಜಯ್ ಶಾಂತಾರಾಮ್‍ರವರ ಶಿವಪ್ರಿಯ ತಂಡ ಒಂದು ಆಕರ್ಷಕ ನೃತ್ಯ ರೂಪಕವನ್ನು ಪ್ರದರ್ಶನ‌ ನೀಡುವ ಮೂಲಕ ಎಲ್ಲರನ್ನು ರಂಜಿಸಿತು. ಕಾರ್ಯಕ್ರಮವನ್ನು ಭಾರತೀಯ ರಾಯಭಾರಿಯವರಾದ ಪಿ.ಕುಮರನ್ ಅತಿಥಿಯಾಗಿ ಆಗಮಿಸಿದ್ದು ಉದ್ಘಾಟನೆ ಮಾಡಿದರು.
ಅಲ್ಲದೆ ಭಾರತೀಯ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಮಣಿಕಂಠನ್ ಅವರು, ನಿಕಟಪೂರ್ವ ಅಧ್ಯಕ್ಷೆ ಮಿಲನ್ ಅರುಣ್, ಐ.ಸಿ.ಬಿ.ಫ್.ನ ಉಪಾಧ್ಯಕ್ಷರಾದ ಮಹೇಶ ಗೌಡ ಹಾಗೂ  ಜಂಟಿ ಕಾರ್ಯದರ್ಶಿಯಾದ ಸುಬ್ರಮಣ್ಯ ಹೆಬ್ಬಾಗಿಲು ಅವರು ಉಪಸ್ಥಿತರಿದ್ದರು. ಅಲ್ಲದೆ ಶ್ರೀಗಂಧ ಸ್ಮರಣ ಸಂಚಿಕೆಯನ್ನು ಕೂಡಾ ಬಿಡುಗಡೆ ಮಾಡಲಾಯಿತು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here