Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೆಇಎ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ‘ಲಿಖಿತ ಪರೀಕ್ಷೆ’ಗೆ ದಿನಾಂಕ ಪ್ರಕಟ.!

 

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಲಿಖಿತ ಪರೀಕ್ಷೆಗೆ ದಿನಾಂಕವನ್ನು ಘೋಷಣೆ ಮಾಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಲಾಖೆಯಲ್ಲಿನ ಕಲ್ಯಾಣ ಸಂಘಟಿಕರು ಗ್ರೂಪ್-ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ.

ಈ ಮೇಲ್ಕಂಡ ಹುದ್ದೆಗಳಿಗೆ ಅಕ್ಟೋಬರ್ 28, 29 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ನಿಗದಿಪಡಿಸಿರೋದಾಗಿ ಹೇಳಿದೆ.