ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಪ್ರತಿಮೆಯ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಮಾನ್ಯ ಮುಖ್ಯಮಂತ್ರಿಯವರಾದ ಬಿ.ಎಸ್.ಯಡಿಯೂರಪ್ಪನವರು ಸಲ್ಲಿಸಲಿದ್ದಾರೆ ಎನ್ನಲಾಗಿದ್ದು, ನಿನ್ನೆ ಈ ವಿಷಯವನ್ನು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಿಸಿಎಂ ಅಶ್ವತ್ ನಾರಾಯಣ ಅವರು ಈ ವಿಚಾರವನ್ನು ಮಾದ್ಯಮಗಳ ಮುಂದೆ ತಿಳಿಸಿದ್ದಾರೆ. ಕೊರೊನಾ ಕಾರಣದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೆಲವರಿಗೆ ಮಾತ್ರ ಆಹ್ವಾನವನ್ನು ನೀಡಲಾಗಿದೆ ಎಂದವರು ತಿಳಿಸಿದ್ದರು.

ಅದರಂತೆ ಇಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದಾರೆ.
ಇಂದು ಕೆಂಪೇಗೌಡ ಜಯಂತಿಯಾದ ಹಿನ್ನೆಲೆಯಲ್ಲಿ ಈ ವಿಶೇಷ ದಿನದಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣದ ಬಳಿ ಗುದ್ದಲಿ ಪೂಜೆ ಮೂಲಕ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾನ್ಯ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಜೊತೆಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳು ಹಾಗೂ ಸಿದ್ದಗಂಗಾ ಶ್ರೀಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಕಾರ್ಯಕ್ರಮದ ಉಸ್ತುವಾರಿಯನ್ನು ಡಿಸಿಎಂ ಅಶ್ವತ್ಥ್​​ ‌ನಾರಾಯಣ್‌ ವಹಿಸಿಕೊಂಡಿದ್ದರು. ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಗೋಪಾಲಯ್ಯ, ಬೈರತಿ ಬಸವರಾಜು, ಸಂಸದ ಬಚ್ಚೇಗೌಡ, ಶಾಸಕ ಶರತ್ ಬಚ್ಚೇಗೌಡ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here