ಕೇರಳ ರಾಜ್ಯಾದ್ಯಂತ ಈಗ ನಿಫಾ ಎಂಬ ಮಾರಣಾಂತಿಕ ಕಾಯಿಲೆ ಅಕ್ಷರಶಃ ಜನಸಾಮಾನ್ಯರ ನಿದ್ದೆಕೆಡಿಸಿದೆ.ಈ ಮಾರಣಾಂತಿಕ ಜ್ವರಕ್ಕೆ ಸದ್ಯಕ್ಕೆ 10 ಜನ ಬಲಿಯಾಗಿದ್ದಾರೆ.ಈ ಕಾಯಿಲೆ ಬಗ್ಗೆ ಜನಜಾಗೃತಿ ಮೂಡಿಸುವುದು ಈಗ ನಮ್ಮೆಲ್ಲರ ಕರ್ತವ್ಯವಾಗಿದೆ.ಈ

ಬಾವಲಿ, ಹಂದಿ ಹಾಗೂ ಇತರೆ ಪ್ರಾಣಿಗಳಿಂದ ಹರಡುವ ಈ ಸೋಂಕಿಗೆ ಇದುವರೆಗೂ ಯಾವುದೇ ಸಿದ್ಧ ಔಷಧ ಅಥವಾ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳನ್ನು ನಿಯಂತ್ರಿಸಲು ಪೂರಕ ಹಾಗೂ ಉಪಶಮನಕಾರಿ ಚಿಕಿತ್ಸೆ ನೀಡಲಾಗುತ್ತದೆ.
ಈ ಮಾರಣಾಂತಿಕ ನಿಫಾ ಕಾಯಿಲೆ ದಿನೇ ದಿನೇ ವ್ಯಾಪಿಸುತ್ತಿದೆ.

ಜ್ವರ, ತಲೆನೋವು, ನಿದ್ದೆ ಮಂಪರು, ಭ್ರಮೆ

* ಗೊಂದಲಕಾರಿ ಮನಸ್ಥಿತಿ, ಉಸಿರಾಟದ ಸಮಸ್ಯೆ, ಕೋಮಾ, ಮಿದುಳು ಸೋಂಕು

ಮಲೇಷ್ಯಾ ಹಾಗೂ ಸಿಂಗಪುರದಲ್ಲಿ ಕ್ರಮವಾಗಿ 1998 ಹಾಗೂ 1999ರಲ್ಲಿ ಈ ನಿಫಾ ವೈರಾಣು ಸೋಂಕು ಕಾಣಿಸಿಕೊಂಡಿತ್ತು. ಸೋಂಕು ಪತ್ತೆಯಾದವರಲ್ಲಿ ಶೇ 50ರಷ್ಟು ಮಂದಿ ಮೃತಪಟ್ಟಿದ್ದರು.

ಬಾವಲಿ ಮೂಲಕ ಮೊದಲಿಗೆ ಮಲೇಷ್ಯಾದ ಗದ್ದೆಗಳಲ್ಲಿರುವ ಹಂದಿಗಳಲ್ಲಿ ಹಾಗೂ ನಂತರದಲ್ಲಿ ಸಾಕುಪ್ರಾಣಿಗಳಾದ ನಾಯಿ, ಬೆಕ್ಕು, ಆಡು, ಕುದುರೆಗಳಲ್ಲಿಯೂ ಸೋಂಕು ಪತ್ತೆಯಾಯಿತು. ಬಳಿಕ ಮನುಷ್ಯರಿಗೂ ಹರಡಿರುವುದು ವರದಿಯಾಗಿತ್ತು.

ಬಾವಲಿಯ ಮೂತ್ರ, ಹಿಕ್ಕೆ ಹಾಗೂ ಜೊಲ್ಲು ಈ ವೈರಾಣು ಸೋಂಕಿನ ಮೂಲ

ಸೋಂಕು ಹರಡುವ ರೀತಿ

1. ಬಾವಲಿಗಳು ತಿಂದಿರುವ ಹಣ್ಣು ಸೇವನೆ

2. ಸೋಂಕಿರುವ ಬಾವುಲಿ, ಹಂದಿಗಳ ಜತೆಗಿನ ಸಂಪರ್ಕ

3. ಸೋಂಕು ಹೊಂದಿರುವ ಇತರೆ ವ್ಯಕ್ತಿಗಳೊಂದಿಗೆ ಸಂಪರ್ಕ, ಒಡನಾಟ

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here