ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರದ ನಾಯಕ ರಾಕಿಂಗ್ ಸ್ಟಾರ್ ಯಶ್ ಅವರು ಇಂದು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬಹಿರಂಗಪಡಿಸಿದ್ದಾರೆ. ಕೆಜಿಎಫ್ ಚಾಪ್ಟರ್ 2 ಚಿತ್ರ ಇದೇ ಅಕ್ಟೋಬರ್ 23 ರಂದು ದಸರಾ ಹಬ್ಬದ ಪ್ರಯುಕ್ತ ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ. ಈ ಹಿಂದಿನಿಂದಲೂ ಸಹ ಕೆಜಿಎಫ್ ಟು ಚಿತ್ರದ ಬಿಡುಗಡೆ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಆದರೆ ಇಂದು ರಾಕಿಂಗ್ ಸ್ಟಾರ್ ಯಶ್ ಅವರೇ ಅಧಿಕೃತವಾಗಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೆಜಿಎಫ್ 2 ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಕೆಜಿಎಫ್ 2 ಚಿತ್ರದ ಬಗ್ಗೆ ಇನ್ನಿಲ್ಲದ ನಿರೀಕ್ಷೆಗಳು ಜನರಲ್ಲಿ ಈಗಾಗಲೇ ಹುಟ್ಟಿಕೊಂಡಿದೆ.

ಕೆಜಿಎಫ್ ಚಿತ್ರದ ಮೂಲಕ ದೇಶಾದ್ಯಂತ ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ವಿಸ್ತರಣೆ ಮಾಡಿದ ಕೆಜಿಎಫ್ ಚಿತ್ರ ತಂಡ ಇದೀಗ ಮತ್ತೊಮ್ಮೆ ಕೆಜಿಎಫ್ ಚಾಪ್ಟರ್ ಟು ಚಿತ್ರದ ಮೂಲಕ ಅದ್ದೂರಿಯಾಗಿ ವಿಶ್ವಾದ್ಯಂತ ಮತ್ತೆ ತಮ್ಮ ಖದರ್ ತೋರಿಸಲು ಸಿದ್ಧವಾಗಿದೆ. ಕೆಜಿಎಫ್ 2 ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಸಿಕ್ಸ್ ಪ್ಯಾಕ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಲೇಟೆಸ್ಟ್ ಸುದ್ದಿಯೊಂದು

ಇತ್ತೀಚೆಗೆ ತಾನೆ ಇಂಟರ್ನೆಟ್ನಲ್ಲಿ ಕೋರಲಾಗಿತ್ತು. ಇದೀಗ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಕೆಜಿಎಫ್ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆ ಆಗಿರುವುದು ಇನ್ನಿಲ್ಲದ ಖುಷಿಗೆ ಕಾರಣವಾಗಿದೆ. ಇನ್ನು ಕೆಜಿಎಫ್ ಟು ಚಿತ್ರದಲ್ಲಿ ಬಾಲಿವುಡ್ ನ ಪ್ರಖ್ಯಾತ ನಟ ಸಂಜಯ್ ದತ್ ಸೇರಿದಂತೆ ವಿಶೇಷ ಪಾತ್ರದಲ್ಲಿ ರವೀನಾ ಟಂಡನ್ ಸಹ ಕಾಣಿಸಿಕೊಂಡಿದ್ದಾರೆ.

KGF empire opens its gates for u.. this October 23rd!! Note the date. Chapter 2 hitting screens worldwide – 23.10.2020!…

Yash यांनी वर पोस्ट केले शुक्रवार, १३ मार्च, २०२०

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here