ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಈಗಾಗಲೇ ನೂರು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ,ಪ್ರಶಾಂತ್ ನೀಲ್ ಅವರ ಬಹು ನಿರೀಕ್ಷಿತ ಕೆಜಿಎಫ್ 2 ಸಿನಿಮಾದ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆಯನ್ನು ಹೇರಿದೆ.
ಈ ಸಿನಿಮಾದ ಚಿತ್ರೀಕರಣಕ್ಕಾಗಿ ಕೋಲಾರ ಜಿಲ್ಲೆಯಲ್ಲಿನ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ದುಬಾರಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗುತ್ತಿದೆ. ಈ ಸಿನಿಮಾ ಚಿತ್ರೀಕರಣದಿಂದ ಸುತ್ತ ಮುತ್ತಲ ಪ್ರದೇಶದಲ್ಲಿ ಪರಿಸರಕ್ಕೆ ಹಾನಿಯಾಗುತ್ತಿದೆ ಮತ್ತು ಸಾರ್ವಜನಿಕರಿಗೆ ಕೂಡಾ ಇದರಿಂದ ತೊಂದರೆಯಾಗಿದೆ ಎಂದು ಶ್ರೀನಿವಾಸ್ ಎಂಬುವವರು ಕೆಜಿಎಫ್ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು.

ಅವರ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್ ಸದ್ಯಕ್ಕೆ ಸಿನಿಮಾ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿದೆ.
ಕೆಜಿಎಫ್ ಮೊದಲ ಭಾಗದಲ್ಲೇ ತನ್ನ ಅಬ್ಬರವನ್ನು ಐದು ಭಾಷೆಗಳಲ್ಲಿ ಮೆರೆದಿತ್ತು. ಆದ್ದರಿಂದಲೇ ಕೆಜಿಎಫ್ ೨ ರ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಅದು ಹುಟ್ಟು ಹಾಕಿದೆ‌. ಈಗಾಗಲೇ ಸಿನಿಮಾದ ಬಹುತೇಕ ಭಾಗದ ಚಿತ್ರೀಕರಣ ಮುಗಿದಿದೆ ಎನ್ನಲಾಗಿದೆ. ಆದರೆ ಈಗ ಅದಕ್ಕೆ ಶ್ರೀನಿವಾಸ್ ಅವರು ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಮತ್ತು ಪರಿಸರದ ಮೇಲೆ ಪರಿಣಾಮ ಬೀರಿದೆ ಎಂದು ಕೋರ್ಟ್ ಮೆಟ್ಟಿಲೇರಿದ ಹಿನ್ನಲೆಯಲ್ಲಿ ಚಿತ್ರೀಕರಣಕ್ಕೆ ತೊಂದರೆಯಾಗಿದೆ.

ಕೆಜಿಎಫ್ 2 ಸಿನಿಮಾ ಕೂಡಾ ಈಗಾಗಲೇ ಜನರ ಗಮನವನ್ನು ತನ್ನತ್ತ ಸೆಳೆದಿದ್ದು, ಈ ಬಾರಿ ಸಿನಿಮಾದಲ್ಲಿ ಬಾಲಿವುಡ್ ಹಿರಿಯ ನಟ ಸಂಜಯ್ ದತ್ ಅವರು ಅಧೀರ ಪಾತ್ರದಲ್ಲಿ ಚಿತ್ರಕ್ಕೆ ಪ್ರವೇಶ ಮಾಡಿದ್ದಾರೆ. ಅವರ ಫಸ್ಟ್ ಲುಕ್ ಫೋಟೋ ಈಗಾಗಲೇ ಬಹಳಷ್ಟು ವೈರಲ್ ಆಗಿರುವುದು ಕೂಡಾ ಎಲ್ಲರಿಗೂ ತಿಳಿದಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here