ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ.

ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ ಮನೆ ಖಾಲಿ ಇರುತ್ತದೆ. ಇನ್ನೊಬ್ಬ ಅರ್ಚಕರು ತಲಕಾವೇರಿಯ ಮನೆಯಲ್ಲಿಯೇ ಕುಟುಂಬದೊಂದಿಗೆ ವಾಸವಿರುತ್ತಾರೆ. 04 ಜನ ಕಾಣೆಯಾಗಿರುವ ಮಾಹಿತಿ ಇದೆ. ಜಿಲ್ಲೆಯ Advanced Rescue Team ಸದರಿ ಸ್ಥಳಕ್ಕೆ ಧಾವಿಸುತ್ತಿದ್ದು, ಪರಿಶೀಲನೆ ನಂತರ ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಎಂದು

ಕೊಡಗು ಜಿಲ್ಲಾಧಿಕಾರಿ ತಿಳಿಸಿದ್ದಾರೆ

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here