ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ ಏಳರಂದು ಚಂದ್ರಯಾನ-2 ಯೋಜನೆಯಲ್ಲಿ ವಿಕ್ರಂ ಲ್ಯಾಂಡರ್​ ಅನ್ನು ಚಂದ್ರನ ಮೇಲಿಳಿಸುವ ಇಸ್ರೋದ ಶ್ರಮ ಹಾಗೂ ಸಾಹಸವನ್ನು ನೋಡುವುದಕ್ಕಾಗಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದರು. ಆದರೆ ಕೊನೆಯ ಹಂತದಲ್ಲಿ ಲ್ಯಾಂಡರ್​ ಸಂಪರ್ಕ ಕಳೆದುಕೊಂಡುಣ ವಿಜ್ಞಾನಿಗಳಿಗೆ ಬೇಸರವಾದಾಗ, ಅವರಿಗೆ ಆತ್ಮಸ್ಥೈರ್ಯ ತುಂಬಿದ್ರು ಮೋದಿ. ಆದರೆ, ರಾಜ್ಯದಲ್ಲಿ ಉಂಟಾದ ನೆರೆ ಸಂತ್ರಸ್ತರನ್ನು ಅವರು ತಿರುಗಿ ಕೂಡಾ ನೋಡದೆ ಹೋಗಿದ್ದೆಷ್ಟು ಸರಿ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಗಳನ್ನು ಮಾಡಿ ಮೋದಿಯವರ ನಡೆಯನ್ನು ಪ್ರಶ್ನೆ ಮಾಡಿದ್ದಾರೆ. ತಮ್ಮ ಟ್ವೀಟ್ ನಲ್ಲಿ ಅವರು “ಚಂದ್ರಯಾನ-೨ ವೀಕ್ಷಿಸಲು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದು ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ್ದು ಸ್ವಾಗತಾರ್ಹ. ಆದರೆ, ನೆರೆಯಿಂದ ತತ್ತರಿಸಿ ಬೀದಿಗೆ ಬಿದ್ದಿರುವ ಸಾವಿರಾರು ಕುಟುಂಬಗಳು, ಮಕ್ಕಳನ್ನು ತಿರುಗಿಯೂ ನೋಡದೆ, ಕೇಂದ್ರದಿಂದ ಯಾವುದೇ ಪರಿಹಾರವನ್ನೂ ಘೋಷಿಸದೆ ಹಾಗೆಯೇ ತೆರಳಿದ್ದು ನೋವಿನ
ವಿಚಾರ” ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ರಾಜ್ಯದಲ್ಲಿ ‌ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಪ್ರಧಾನಿಗಳು ಬೆಂಗಳೂರಿಗೆ ಬಂದರೂ ಅವರನ್ನು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗಿಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರದಿಂದ ಪರಿಹಾರ ಧನವನ್ನು ಗಟ್ಟಿ ಧ್ವನಿಯಲ್ಲಿ ಕೇಳಲು ಸಾಧ್ಯವಾಗದಷ್ಟು ಮುಖ್ಯಮಂತ್ರಿಗಳು ದುರ್ಬಲರಾಗಿರೋದು ನಮ್ಮ ರಾಜ್ಯದ ದುರ್ದೈವ ಎಂದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here