ಸಾಲಬಾಧೆಯನ್ನು ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ ರಮೇಶ್ ಅವರು ಸೆಲ್ಫಿ ವಿಡಿಯೋ ಒಂದನ್ನು ಮಾಡಿ, ತನ್ನ ಅಂತ್ಯ ಸಂಸ್ಕಾರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಆಹ್ವಾನಿಸಿ , ನಂತರ ಆತ್ಮಹತ್ಯೆಗೆ ಶರಣಾಗಿದ್ದರು. ಆ ರೈತನ ಅಂತ್ಯ ಸಂಸ್ಕಾರ ಮುಗಿದ ಮೇಲೆ, ವಿಡಿಯೋ ಎಲ್ಲೆಡೆ ವೈರಲ್ ಆದ ಮೇಲೆ, ರೈತನ ಸಾವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಇಂದು ಆ ರೈತನ ಕುಟುಂಬಕ್ಕೆ ಭೇಟಿ ನೀಡಿ, ಅವರಿಗೆ ಸಾಂತ್ವನ ನೀಡಿದ್ದಾರೆ. ಅಲ್ಲದೆ ಅವರ ಕುಟುಂಬಕ್ಕೆ ನೆರವು ಕೂಡಾ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೃತ ರೈತ ರಮೇಶ್ ಅವರ ಪುತ್ರ ಚಂದ್ರು ಅವರಿಗೆ ಸರ್ಕಾರಿ ಉದ್ಯೋಗದ ಭರವಸೆಯನ್ನು ನೀಡಿದ್ದಾರೆ. ಈ ಸಂಬಂಧ ಅವರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಅವರಿಗೆ ಹಾಗೂ ಜಿಲ್ಲಾಧಿಕಾರಿ ಮಂಜು ಶ್ರೀ ಅವರಿಗೆ ಸೂಚನೆಗಳನ್ನು ನೀಡಿದ್ದಾರೆ. ಅದರ ಜೊತೆಗೆ ರಮೇಶ್ ಅವರ ಪುತ್ರಿ ಸುವರ್ಣ ಅವರಿಗೆ ಎಂ.ಕಾಂ. ಶಿಕ್ಷಣವನ್ನು ಮುಂದುವರೆಸಲು ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದಾಗಿಯೂ ಭರವಸೆಯನ್ನು ಅವರು ನೀಡಿದ್ದಾರೆ.

ಮೃತ ಸುರೇಶ್ ಅವರು ಆತ್ಮಹತ್ಯೆ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರಿಗೆ ರೈತರ ಸಂಕಷ್ಟಗಳನ್ನು ಪರಿಹರಿಸಲು ಕೆರೆಗಳನ್ನು ತುಂಬಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದರು. ಅದಕ್ಕೂ ಮಾನ್ಯ ಮುಖ್ಯಮಂತ್ರಿ ಅವರು ಸ್ಪಂದಿಸಿದ್ದಾರೆ. ಅವರ ಮಗ ಹಾಗೂ ಮಗಳ ಭವಿಷ್ಯಕ್ಕೆ ಭರವಸೆ ನೀಡಿದ ಅವರು ಕುಟುಂಬಕ್ಕೆ ಸಾಂತ್ವನದೊಂದಿಗೆ ಐದು ಲಕ್ಷ ರೂಗಳ ಪರಿಹಾರವನ್ನು ಕೂಡಾ ನೀಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here