ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರುವುದಕ್ಕೆ ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.ಇಂದು ರಾಜ್ಯದ ಶಕ್ತಿಕೇಂದ್ರ ಬೆಂಗಳೂರಿನ ವಿಧಾನಸೌಧದ ಮುಂಬಾಗದಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾದ್ಯಕ್ಷ ಹೆಚ್ ಡಿ‌ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ‌.

ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರ ಬೆಂಬಲದೊಂದಿಗೆ ಜೆಡಿಎಸ್ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು.ಇಂದು ನಡೆಯುವ ಅದ್ದೂರಿ ಕಾರ್ಯಕ್ರಮಕ್ಕೆ ದೇಶದ ರಾಜಕೀಯ ಗಣ್ಯರು ಆಗಮಿಸಲಿದ್ದಾರೆ.ಹೆಚ್ ಡಿ ದೇವೇಗೌಡರು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಮಯಾವತಿ ,

ಚಂದ್ರಬಾಬು ನಾಯ್ಡು ಸೇರಿದಂತೆ ತೃತೀಯ ರಂಗದ ಘಟಾನುಘಟಿಗಳು ಕುಮಾರಸ್ವಾಮಿ ಅವರ ಪದಗ್ರಹಣಕ್ಕೆ ಆಗಮಿಸಲಿದ್ದಾರೆ. ಇನ್ನು ಈ ಅದ್ದೂರಿ ಕಾರ್ಯಕ್ರಮಕ್ಕೆ ಲಕ್ಷಾಂತರ ಕಾರ್ಯಕರ್ತರು ಆಗಮಿಸಲಿದ್ದು ಇದಕ್ಕಾಗಿ ಸೂಕ್ತ ಭದ್ರತೆ ನಿಯೋಜಿಸಲಾಗಿದೆ.ಈಗಾಗಲೇ ವಿಧಾನಸೌಧದ ಮುಂದೆ ಸಕಲ ಸಿದ್ದತೆಗಳು ಮುಗಿದಿದ್ದು ಸಂಜೆಯ ಕಾರ್ಯಕ್ರಮಕ್ಕೆ ದೇಶದ ಪ್ರಮುಖವಾದ ವ್ಯಕ್ತಿಗಳು ಕಾಯುತ್ತಿದ್ದಾರೆ‌.

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here