ಸಮ್ಮಿಶ್ರ ಸರ್ಕಾರದಲ್ಲಿ ಎರಡು ಪಕ್ಷಗಳ ಒಳಗಿನ ಕದನ ಇನ್ನೂ ಮುಗಿದಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಕೆಲವು ಜನಪ್ರಿಯ ಯೋಜನೆಗಳನ್ನು ರೂಪಿಸಿದ್ದರು. ಅವುಗಳನ್ನು ಸಮ್ಮಿಶ್ರ ಸರ್ಕಾರವು ಸಹ ಮುಂದುವರಿಸುತ್ತಿತ್ತು. ಆದರೆ ಸಮ್ಮಿಶ್ರ ಸರ್ಕಾರವು ಸರ್ಕಾರ ರಚಿಸಿ ಮೂರು ತಿಂಗಳು ಕಳೆಯುತ್ತಿದ್ದಂತೇ ಇದೀಗ ಕಾಂಗ್ರೆಸ್ ಸರ್ಕಾರದ ಒಂದೊಂದೇ ಜನಪ್ರಿಯ ಯೋಜನೆಗಳಿಗೆ ಬ್ರೇಕ್ ಬೀಳುತ್ತಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಅನ್ನ ಭಾಗ್ಯ , ಕ್ಷೀರ ಭಾಗ್ಯ , ಸೇರಿದಂತೆ ಹಲವು ಭಾಗ್ಯಗಳನ್ನು ನೀಡಿದ್ದರು. ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ಜನಪ್ರಿಯ ಯೋಜನೆಗಳ ಪೈಕಿ

ರಾಜ್ಯದ ಗರ್ಭಿಣಿ ಮಹಿಳೆಯರಿಗೆ ಅನುಕೂಲಕರ ಆಗುವಂತೆ ಮಾತೃಪೂರ್ಣ ಯೋಜನೆ ಜಾರಿಗೆ ತಂದಿದ್ದರು.ಮಾತೃಪೂರ್ಣ ಯೊಜನೆಯಡಿ ರಾಜ್ಯದ ಅಂಗನವಾಡಿ ಗಳಲ್ಲಿ ಸುಮಾರು ಮೂವತ್ತು ಲಕ್ಷಕ್ಕೂ ಹೆಚ್ಚಿನ ಗರ್ಭಿಣಿಯರಿಗೆ ಪ್ರತಿ ದಿನ ಮಧ್ಯಾಹ್ನದ ಸಮಯದಲ್ಲಿ ಪೌಷ್ಟಿಕಾಹಾರ ನೀಡಲಾಗುತ್ತಿತ್ತು. ಕಾಳು ಮೊಟ್ಟೆ ಸೇರಿದಂತೆ ವಿಟಮಿನ್ ಬರುವಂತಹ ಭೋಜನ ನೀಡುವ ಈ ಯೋಜನೆಗಾಗಿ ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಮಾರು 202 ಕೋಟಿ ರು ಮೀಸಲಿಟ್ಟಿತ್ತು. ಈಗ ಈ ಜನಪ್ರಿಯ ಯೋಜನೆ ಸ್ಥಗಿತಗೊಳಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಚಿಂತಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಈ ಬಗ್ಗೆ ಅಧಿಕಾರಿಗಳು ಕುಮಾರಸ್ವಾಮಿ ಅವರ ಜೊತೆ ಸಭೆ ನಡೆಸಿದಾಗ ಈ ಯೋಜನೆ ಸರಿಯಾದ ಮಟ್ಟದಲ್ಲಿ ರಾಜ್ಯದ ಜನರಿಗೆ ತಲುಪುತ್ತಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳ ಈ ಹೇಳಿಕೆಗೆ ಕುಮಾರಸ್ವಾಮಿ ಅವರು ಉತ್ತರಿಸಿ ಯೋಜನೆ ಸರಿಯಾಗಿ ತಲುಪುತ್ತಿಲ್ಲ ಎಂದಾಗ ಈ ಯೋಜನೆ ನಿಲ್ಲಿಸಿಬಿಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಕುಮಾರಸ್ವಾಮಿ ಅವರ ಈ ಸೂಚನೆ ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ ಶಾಸಕರಿಗೇ ಅಸಮಾಧಾನ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಜಯಮಾಲ ಅವರು ಯಾವುದೇ ಕಾರಣಕ್ಕೂ ಈ ಜನಪ್ರಿಯ ಯೋಜನೆ ನಿಲ್ಲಿಸಲಾಗವುದಿಲ್ಲ ಇದರ ಬಗ್ಗೆ ನಾನು ನಮ್ಮ ನಾಯಕರ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here