ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರಬೇಕೆಂದು ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಆಹ್ವಾನ ನೀಡಿದ್ದು, ಅವರಿಬ್ಬರೂ ಬೆಂಗಳೂರಿಗೆ ಬರಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ದೆಹಲಿಯಲ್ಲಿ ರಾಹುಲ್ ಗಾಂಧಿ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ಒಬ್ಬನೇ ಪ್ರಮಾಣವಚನ ಸ್ವೀಕರಿಸಲಿದ್ದೇನೆ.

ನಂತರ ಸಚಿವ ಸಂಪುಟ ರಚನೆ ಬಗ್ಗೆ ರ್ಚಚಿಸಿ ತೀರ್ವನಿಸಲಿದ್ದೇವೆ ಎಂದು ತಿಳಿಸಿದರು. ಪ್ರಣಾಳಿಕೆಯಲ್ಲಿ ಹೇಳಿದ್ದಂತೆ ರೈತರ ಸಾಲಮನ್ನಾ ಮಾಡುತ್ತೀರಾ ಎಂಬ ಪ್ರಶ್ನೆಗೆ ನೇರ ಉತ್ತರ ನೀಡದ ಅವರು, ನಾನು ಹಲವಾರು ಕಾರ್ಯಕ್ರಮಗಳನ್ನು ಜನರ ಮುಂದಿಟ್ಟಿದ್ದೇನೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ನನ್ನ ಜವಾಬ್ದಾರಿ. ಅದಕ್ಕಿಂತ ಹೆಚ್ಚಾಗಿ ರಾಜ್ಯದಲ್ಲಿ ರೈತ ಸಮುದಾಯದ ರಕ್ಷಣೆಯಾಗಬೇಕಿದ್ದು, ಅದಕ್ಕೆ ಪೂರಕವಾದ ಕಾರ್ಯಕ್ರಮ ರೂಪಿಸುವ ಯೋಚನೆಯಲ್ಲಿದ್ದೇನೆ ಎಂದರು.

ಸ್ವತಂತ್ರ ಸರ್ಕಾರ ಬಂದರೆ ಸಾಲ ಮನ್ನಾ ಮಾಡುತ್ತೇನೆ ಎಂದಿದ್ದೆ. ಎಲ್ಲ ಪ್ರಶ್ನೆಗಳಿಗೂ ಸದ್ಯದಲ್ಲೇ ಉತ್ತರ ಕೊಡಲಿದ್ದೇನೆ, ಕಾದು ನೋಡಿ ಎಂದು ಸ್ಪಷ್ಟಪಡಿಸಿದರು.ಸೋನಿಯಾ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.ಕಾಂಗ್ರೆಸ್ ವರಿಷ್ಠರ ಭೇಟಿ ಸಂದರ್ಭದಲ್ಲಿ ಸೋನಿಯಾ ಗಾಂಧಿ ಕಾಲಿಗೆ ನಮಸ್ಕರಿಸಿ ಕುಮಾರಸ್ವಾಮಿ, ಆಶೀರ್ವಾದ ಕೋರಿದರು.ಇನ್ನು ಈ ಕಾರ್ಯಕ್ರಮಕ್ಕೆ ಮಾಯಾವತಿ ಸಹ ಆಗಮಿಸಲಿದ್ದಾರೆ.ಪ್ರಮಾಣ ವಚನ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅಧ್ಯಕ್ಷ ರಾಹುಲ್ ಗಾಂಧಿ,

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ, ಕೆ. ಚಂದ್ರಶೇಖರರಾವ್, ಅರವಿಂದ ಕೇಜ್ರಿವಾಲ್, ಚಂದ್ರಬಾಬು ನಾಯ್ಡು, ಪಿಣರಾಯಿ ವಿಜಯನ್, ಬಿಎಸ್​ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ತಮಿಳುನಾಡಿನ ಪ್ರತಿಪಕ್ಷದ ನಾಯಕ ಎಂ.ಕೆ. ಸ್ಟಾಲಿನ್, ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖಂಡರು ಪಾಲ್ಗೊಳ್ಳುವರು.

ಈ ಮೊದಲು ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ನಿಗದಿಯಾಗಿತ್ತು. ಆದರೆ, ಬುಧವಾರ 12ರಿಂದ 1.30ರ ವರೆಗೆ ರಾಹುಕಾಲ ಇರುವ ಹಿನ್ನೆಲೆಯಲ್ಲಿ ಸಮಯ ಬದಲಾಯಿಸಿದ್ದು, ಸಂಜೆ 4.30ಕ್ಕೆ ಪದಗ್ರಹಣ ಸಮಾರಂಭ ನಿಗದಿಯಾಗಿದೆ. ಆದರೆ, ಬಿಸಿಲಿನ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here