ರಾಮನಗರ: ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ ಕುಮಾರಸ್ವಾಮಿ ಅವರು ಮಾಗಡಿ ವಿಧಾನಸಭೆ ಕ್ಷೇತ್ರದ ಕೇತಗಾನಹಳ್ಳಿಯಲ್ಲಿ ಮತಚಲಾಯಿಸಿದರು.ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಮತಗಟ್ಟೆ 232ಕ್ಕೆ ಬಂದು ಹೆಚ್‌ಡಿಕೆ ಮತ ಹಕ್ಕು ಚಲಾಯಿಸಿದರು.

ಈ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಎ.ಮಂಜುನಾಥ್ ಸ್ಪರ್ಧಿಸಿದ್ದು, ಕಾಂಗ್ರೆಸ್‌ನಿಂದ ಹೆಚ್.ಸಿ.ಬಾಲಕೃಷ್ಣ ಸ್ಪರ್ಧೆ ಮಾಡಿದ್ದಾರೆ. ರಾಮನಗರ, ಚೆನ್ನಪಟ್ಟಣದಿಂದ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದಾರೆ.ಮತದಾನದ ಬಳಿಕ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ ಅವರು,

ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆಗೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಲ್ಲ. ನಾನು ಯಾರ ಮನೆ ಬಾಗಿಲಿಗೂ ಹೋಗಲ್ಲ, ಅವರೂ ನನ್ನ ಮನೆ ಬಾಗಿಲಿಗೆ ಬರೋದು ಬೇಡ ಎಂದರು.

ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ಸಮ್ಮಿಶ್ರ ಸರ್ಕಾರ ರಚನೆಯಾಗುತ್ತಾ ಎಂಬ ಅನುಮಾನ ಮೂಡಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here