ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತನಾಡುತ್ತಾ ನಾನು ಯಾರ ಋಣದಲ್ಲೂ ಮುಖ್ಯಮಂತ್ರಿ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಬೇಡಿ ಕೊಂಡಿದ್ರು ಎಂದು ಹೇಳಿಕೆಯೊಂದನ್ನು ನೀಡಿದ್ದಾರೆ.
ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಮಾತನಾಡುತ್ತಾ ಕೆಲವು ನಾಯಕರು ರಾಮನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎಂದು ತೀವ್ರ ಅಸಮಾಧಾನವನ್ನು ಹೊರಹಾಕುತ್ತಾ, ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರ ವಿರುದ್ಧ ಸಿಟ್ಟನ್ನು ಅವರು ಹೊರ ಹಾಕಿದ್ದಾರೆ.‌

ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಆಗ ಕೆಲವರು ಬೆಂಬಲವನ್ನು ನೀಡಿದ್ದರು. ಯಾರಿಂದ ಅಧಿಕಾರ ಕಳೆದುಕೊಂಡೆ‌ ಎಂಬುದು ನನಗೆ ತಿಳಿದಿದೆ. ಕೆಲವರು ಕುಮಾರಸ್ವಾಮಿ ಅವರನ್ನು ಉಳಿಸಿದ್ದೆ ತಾವು ಎಂದು ಹೇಳಿಕೊಂಡು ಪ್ರಚಾರ ಪಡೆದುಕೊಂಡಿದ್ದಾರೆ. ಈಗ ನಮ್ಮ ಪಕ್ಷವನ್ನು ಮುಗಿಸುವುದಾಗಿ ಹೇಳಿದ್ದಾರೆ ಎಂದು ಜಿಲ್ಲೆಯ ಕಾಂಗ್ರೆಸ್ ನಾಯಕರ ಹೆಸರನ್ನು ಅವರು ಹೇಳದೆ ತಮ್ಮ‌ಅಸಮಾಧಾನವನ್ನು ಹಾಗೂ ಸಿಟ್ಟನ್ನು ಹೊರ ಹಾಕಿ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ.

ಅವರು ನನ್ನದೊಂದು ಸಣ್ಣ ಪಕ್ಷವಿದೆ. ರೈತರ ಪಕ್ಷ ಅದು, ಅದನ್ನು ದಿವಾಳಿ ಮಾಡಿ ಬೇರೆ ಯಾರಿಗೋ ಅಧಿಕಾರ ಕೊಡಲು ಓಡಾಡುವುದಿಲ್ಲ ಎಂದಿದ್ದು ರಾಜ್ಯದಲ್ಲಿ ಯಾವ ಮೈತ್ರಿಯೂ ಇಲ್ಲ ಎಂದಿದ್ದಾರೆ. ಇದೇ ವೇಳೆ ಅವರು ಆರೋಗ್ಯ ಸಚಿವ ಶ್ರೀ ರಾಮುಲು ಅವರ ಮೆರವಣಿಗೆ, ಅದ್ದೂರಿ ಸ್ವಾಗತದ ಬಗ್ಗೆ ಮಾತನಾಡಿ ಕೊರೊನಾ ಪರಿಸ್ಥಿತಿಯಲ್ಲಿ ಜನ ನರಳುತ್ತಿದ್ದು ಮೊದಲು ಜನರ ಪರವಾಗಿ ನಿಲ್ಲಬೇಕು. ‌ಇವರು ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಮಂತ್ರಿಗಳು ಇಂತಹ ಕಾರ್ಯಕ್ರಮಗಳನ್ನು ನಿಲ್ಲಿಸಬೇಕು ಎಂದಿದ್ದಾರೆ.‌

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here