ಬೆಂಗಳೂರಿನ ಹೆಗಡೆ ನಗರದ ಬಳಿ ಸಾದಿಕ್ ನಗರದಲ್ಲಿ ನಡೆಯುತ್ತಿದ್ದ ಹೆಲ್ತ್ ಸರ್ವೆ ಸಂದರ್ಭದಲ್ಲಿ ಅಲ್ಲಿನ ಜನರು ಆಶಾ ಕಾರ್ಯಕರ್ತೆಯರ ಮೇಲೆ ನಡೆಸಿದ ಹಲ್ಲೆ ಈಗಾಗಲೇ ಸಾಕಷ್ಟು ಸುದ್ದಿಯಾಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಅಲ್ಲಿ ದೌರ್ಜನ್ಯ ಎಸಗಿದವರ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಜನರು ತಮ್ಮ ಆಕ್ರೋಶವನ್ನು ಹೊರ ಹಾಕುವಾಗಲೇ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡಾ ಈ ವಿಷಯವಾಗಿ ಸರಣಿ ಟ್ವೀಟ್ ಮಾಡಿ, ದೌರ್ಜನ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರು ತಮ್ಮ ಟ್ವೀಟ್ ನಲ್ಲಿ
“ಬೆಂಗಳೂರಿನ ಹೆಗಡೆ‌ನಗರದ ಬಳಿ ಬರುವ ಸಾಧಿಕ್‌ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ ವೇಳೆ‌ ಯುವಕರು ಗುಂಪಾಗಿ ಸೇರಿ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ್ದು ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ರಾಷ್ಟ್ರದ ಹಿತಾಸಕ್ತಿ ವಿರುದ್ಧ ಯಾರೂ ಧ್ವನಿ ಎತ್ತಬಾರದು. ಅತಿರೇಕದ ವರ್ತನೆಗಳಿಗೆ ಖಂಡಿತಾ ನನ್ನ ಬೆಂಬಲವಿಲ್ಲ. ಇದು ಜಾತಿ-ಧರ್ಮಗಳ ಪ್ರಶ್ನೆಯಲ್ಲ. ರಾಷ್ಟ್ರದ ಭವಿಷ್ಯದ ಪ್ರಶ್ನೆ.” ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಅವರು, “ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ.ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ” ಎಂದು ಅವರು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here