ಪಾದರಾಯನಪುರ ಬಳಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್​ಗಳನ್ನು ಮಾಡಿದ್ದು, ಪೊಲೀಸರು, ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಭಂಗ ತರುತ್ತಿರುವವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಹೆಚ್​ಡಿಕೆ ಹೇಳಿದ್ದಾರೆ.ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ,ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ.

ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.ದೇಶದ ಸ್ವಾಸ್ಥ್ಯ ಕಿಂತ ಬೇರಾವುದೂ ಮುಖ್ಯವಲ್ಲ. ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದು.ಕಾನೂನು ಕೈಗೆತ್ತಿಕೊಂಡು ಗೂಂಡಾಗಿರಿ,ದೌರ್ಜನ್ಯ ನಡೆಸಿರುವುದು ಅಕ್ಷಮ್ಯ ಅಪರಾಧ.ಯಾವುದೇ ಧರ್ಮದವರಿರಲಿ ಈ ದೇಶದ ಕಾನೂನಿಗೆ ತಲೆ ಬಾಗಿಸಬೇಕು. ಇಂತಹ ಅತಿರೇಕದ ಹುಚ್ಚಾಟಗಳನ್ನು ಯಾರೂ ಪ್ರದರ್ಶಿಸ ಕೂಡದು. ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು.

ಇಡೀ ಜಗತ್ತು ಎದುರಿಸುತ್ತಿರುವ ಕರೋನಾ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ.ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು ಎಂದು ಮಾಜಿ ಮುಖ್ಯಮಂತ್ರಿ h d ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here