ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದತ್ತ ಎಲ್ಲರ ಚಿತ್ತ ನೆಟ್ಟಿದೆ. ಒಂದು ಕಡೆ ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್  ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಧುಮುಕ್ಕಿದ್ದರೆ, ಮತ್ತೊಂದೆಡೆ ನಾಡಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ  ಪುತ್ರ ನಿಖಿಲ್ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆಗಳಿದಿದ್ದಾರೆ.ಇದರಿಂದ ಮಂಡ್ಯ ಲೋಕಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ಭಾರೀ ರಂಗೇರಿತ್ತಿದ್ದು, ಮಂಡ್ಯ ಕ್ಷೇತ್ರ ಕುಮಾರಸ್ವಾಮಿಗೆ ಪ್ರತಿಷ್ಠೆಯ ಕಣವಾಗಿದ್ದು, ಮಗನನ್ನು ಗೆಲ್ಲಿಸಲೇಬೇಕಾದ ಅನಿರ್ವಾಯತೆ ಎದರುರಾಗಿದೆ.ಈ ಹಿನ್ನೆಯಲ್ಲಿ ಸುಮಲತಾ ವರನ್ನು ಸೋಲಿಸಲು ಕುಮಾರಸ್ವಾಮಿ ತಮ್ಮ ಬತ್ತಳಕೆಯಲ್ಲಿರುವ ಬಾಣಗಳನ್ನು ಒಂದೊಂದಾಗಿಯೇ ಪ್ರಯೋಗಿಸುತ್ತಿದ್ದಾರೆ.

ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಮಂಡ್ಯ ಕ್ಷೇತ್ರದ್ದೇ ಹವಾ.ಮಂಡ್ಯದ ಕೆಲವು ಅಂಬರೀಶ್ ಅಭಿಮಾನಿಗಳು ಜೆಡಿಎಸ್‌ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಜೆಡಿಎಸ್ ಅಭಿಮಾನಿಗಳು ಸಹ ಸುಮಲತಾ ಅಂಬರೀಶ್ ಗೆ ಟಾಂಗ್ ಕೊಡುತ್ತಿದ್ದಾರೆ.ಇನ್ನು ಕುಮಾರಸ್ವಾಮಿ ಸಹ ಟ್ವಿಟ್ಟರ್ ನಲ್ಲಿ ಸುಮಲತಾ ಅಂಬರೀಶ್ ಗೆ ಸರಣಿ ಟ್ವೀಟ್ ಮೂಲಕ ಸೂಕ್ಷ್ಮವಾಗಿ ಟಾಂಗ್ ಕೊಟ್ಟಿದ್ದಾರೆ.

ಗೌರವಾನ್ವಿತ ಸುಮಲತಾ ಅವರೇ, ನಿಮ್ಮ ರೈತಪರ ಮಾತು ಓದಿ ಇನ್ನಿಲ್ಲದಷ್ಟು ಸಂತೋಷವಾಯಿತು. ನನಗಾಗಲೀ ನನ್ನ ತಂದೆಯವರಿಗಾಗಲೀ ರೈತರ ಬಗ್ಗೆ ಏನೇನೂ ಗೊತ್ತಿಲ್ಲ. ಮಣ್ಣಿನ ಮಕ್ಕಳು ಎಂದು ಈ ದೇಶದ ಜನ ಪ್ರೀತಿಯಿಂದ ಕರೆದರು. ನಮ್ಮದು ರೈತರಿಗೆ ಮಿಡಿದ ಮನ. ಆದರೆ ಈಗ ದಿಢೀರನೆ ಪ್ರತ್ಯಕ್ಷರಾಗಿ ಪ್ರತೀ ದಿನ ಹೊಲ ಗದ್ದೆಗಳಲ್ಲಿ ದುಡಿದು, ಉತ್ತು ಬಿತ್ತಿದ ಅನುಭವ ಹಂಚಿಕೊಳ್ಳುತ್ತಿದ್ದೀರಿ. ರೈತರನ್ನು ಉದ್ಧಾರ ಮಾಡಲು ನಿಮ್ಮ ಸಲಹೆ ತುಂಬಾ ಮುಖ್ಯ ಕೇಳಲು ನಾವು ಕಾತರರಾಗಿದ್ದೇವೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here