ಬಿ.ಎಸ್.ಯಡಿಯೂರಪ್ಪನವರು ಹುಬ್ಬಳ್ಳಿಯಲ್ಲಿ ಮಾತನಾಡುತ್ತಾ ಮೈತ್ರಿ ಸರ್ಕಾರದಲ್ಲಿ ತಲ್ಲಣ ಮೂಡಿಸುವ ಪ್ರಯತ್ನವನ್ನು ಮಾಡಿದ್ದಾರೆ. ಅವರು ಮಾತನಾಡುತ್ತಾ ಕಾಂಗ್ರೆಸ್ಸಿನ 20 ಶಾಸಕರಿಗೆ ಮೈತ್ರಿ ಸರ್ಕಾರದ ಬಗ್ಗೆ ಅಸಮಾಧಾನವಿದೆಯೆಂದು, ಆ ಅಸಮಾಧಾನಿತ ಶಾಸಕರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆಂದು ಬಾಂಬ್ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಡ್ಯ ಹಾಗೂ ತುಮಕೂರಿನಲ್ಲಿ ಸೋಲುವ ಭಯವಿದ್ದು ಅದಕ್ಕೆ ಸಿಎಂ‌ ಕುಮಾರಸ್ವಾಮಿ ಹಾಗೂ ದೇವೇಗೌಡರು ರೆಸಾರ್ಟ್ ಕಡೆ ಹೋಗಿದ್ದಾರೆಂದು ವ್ಯಂಗ್ಯ ಮಾಡಿದ್ದಾರೆ.

ಈಗ ಅಸ್ಥಿತ್ವದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಮೇಲೆ ಕಾಂಗ್ರೆಸ್ ನಲ್ಲೇ ಇರುವ 20 ಜನ ಶಾಸಕರಿಗೆ ಅಸಮಾಧಾನವಿದೆಯೆಂದು, ಮುಂದಿನ ಕೆಲವೇ ದಿನಗಳಲ್ಲಿ ಅವರೆಲ್ಲಾ ರಾಜೀನಾಮೆ ನೀಡುವ ಸಾಧ್ಯತೆಗಳಿವೆಯೆಂದು ಅವರು ಹೇಳಿದ್ದಾರೆ. ಯಡಿಯೂರಪ್ಪನವರು ನಮ್ಮ ಪಕ್ಷದಲ್ಲಿ ಆಗಲೇ 104 ಶಾಸಕರು ಇದ್ದೇವೆ. 3 ಜನ ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಲು ಸಿದ್ಧವಾಗಿದ್ದಾರೆಂದು, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದರೆ ಅದರಿಂದ ಬಿಜೆಪಿಗೆ ಸರ್ಕಾರ ರಚಿಸಲು ಸಹಾಯ ಆಗಲಿದೆಯೆಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

ಯಡಿಯೂರಪ್ಪ ಈ ಹಿಂದೆ ಹಲವು ಬಾರಿ ಹೇಳಿದಂತೆ ಈಗ‌ ಮತ್ತೊಂದ ಬಾರಿ ದೋಸ್ತಿ ಸರ್ಕಾರ ಪತನವಾಗಲಿದೆಯೆಂದು ಭವಿಷ್ಯ ನುಡಿದರು. ಈ ಬಾರಿ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಖಚಿತವಾಗಿ ಗೆಲ್ಲುತ್ತಾರೆ. ಆದರೆ ತುಮಕೂರಿನಲ್ಲಿ ದೇವೇಗೌಡರಿಗೆ ಗೆಲ್ಲುವು ಕಷ್ಟ ಎಂದಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿಯಾಗಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here