ಬೆಂಗಳೂರು: ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗೆ ಚಾಲನೆ ನೀಡಲಾಗಿದೆ. ಇನ್ನೂ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ನೀಡಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಹೌದು, ಮನೆ ಯಜಮಾನಿಗೆ 2000 ರೂ. ಹಣ ನೀಡುವ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಮುಹೂರ್ತ ನಿಗದಿಪಡಿಸಿದೆ. ನಾಳೆ ಜುಲೈ 19 ರಂದು ಸಂಜೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈ