ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಧರ್ಮದ ದಂಗಲ್ ನಡೆಯುತ್ತಿದ್ದು ಇದರ ಬಗ್ಗೆ ಕಾಂಗ್ರೆಸ್ ನಾಯಕರು ಮತ್ತು ಬಿಜೆಪಿ ನಾಯಕರು ಏತಿಗೆ ಏಟು ಎಂಬುವಂತೆ ಒಬ್ಬರಿಗೊಬ್ಬರು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಇನ್ನು ಗ್ರಹ ಸಚಿವರಾಗಿರುವಂತಹ ಪರಮೇಶ್ವರ್ ರವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನ್ನು ಹೇಳಿದ್ದಾರೆಂದು, ಕಳೆದ ಎರಡು ದಿನಗಳಿಂದ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರವರು, ನಾನು ಸನಾತನ ಧರ್ಮದ ಬಗ್ಗೆ ಮಾತಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡ್ತಾರೋ ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ. ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಹಿಂದೂ ಧರ್ಮ ಯಾರಿಗೆ ಹುಟ್ಟಿದ್ದು, ಯಾವಾಗ ಹುಟ್ಟಿದ್ದು ಎಂಬು ನನ್ನ ಹೇಳಿಕೆ. ನಮ್ಮ ಅಭಿಪ್ರಾಯ ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಪರಮೇಶ್ವರ್ ಸ್ಪಷ್ಟನೆಯ ರೂಪದಲ್ಲಿ ಸನಾತನ ಧರ್ಮ ಕುರಿತಾದ ತಮ್ಮ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಗದಗಕ್ಕೆ ತೆರಳುವ ಮಾರ್ಗದಲ್ಲಿ ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸನಾತನ ಧರ್ಮ ಕುರಿತಾದ ತಮ್ಮ ಹೇಳಿಕೆಯ ಬಗ್ಗೆ ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೆ ಮಾತಾಡ್ತಾರೆ, ಹೀಗೆ ಮಾತಾಡ್ತಾರೆ ಅಂದ್ರೆ ನಾನು ಅದಕ್ಕೆ ಉತ್ತರ ಕೊಡೋಲ್ಲ. ಮೋದಿ ಅವರು ನಾನು ಹೇಳಿರೋ ಹೇಳಿಕೆ ಬಗ್ಗೆ ಮಾತಾಡಿಲ್ಲ. ಸನಾತನ ಧರ್ಮದ ವಿಚಾರವಾಗಿ ಮಾತಾಡಿದ್ದಾರೆ ಎಂದು ಜಿ ಪರಮೇಶ್ವರ ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಬಿಜೆಪಿಯವರಿಗೆ ಏನು ಬೇರೆ ಕಾನೂನು ಇದೆಯಾ? ಬಿಜೆಪಿಯವರು ಹೋರಾಟ ಮಾಡಲಿ ನಾವು ಉತ್ತರ ಕೊಡ್ತೀವಿ ಎಂದ ಪರಮೇಶ್ವರ ಅವರು ಈಗಾಗಲೇ ಜನ ಉತ್ತರ ಕೊಟ್ಟಿದ್ದಾರೆ, ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿಗೆ ಜನ ಉತ್ತರ ಕೊಡ್ತಾರೆ ಎಂದು ಪರಮೇಶ್ವರ್ ಇದೇ ಸಂದರ್ಭದಲ್ಲಿ ಮಾರ್ಮಿಕವಾಗಿ ಹೇಳಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.