ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ ಎಂದಿದ್ದಾರೆ.
ರಾಜ್ಯಕ್ಕೆ ಕರ್ನಾಟಕವೆಂದು ಮರುನಾಮಕರಣವಾಗಿ 50 ವರ್ಷಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸಿದ್ದಾರೆ.
ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ… pic.twitter.com/ES4MqJU6CJ
— Siddaramaiah (@siddaramaiah) November 1, 2023
Disclaimer: This Story is auto-aggregated by a Syndicated Feed and has not been Created or Edited By City Big News Staff.