ಬೆಂಗಳೂರು: ವಿಶ್ವಕಪ್ 2023 ರಲ್ಲಿ ಭಾರತ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಅನುಭವಿಸುವುದರಿಂದ ಬರಿ ಆಟಗಾರರಿಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ದುಃಖವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಹೌದು, ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಭಾರತ ತಂಡ ಎಡವಿದೆ. ಆದರೆ, ಟೂರ್ನಿಯಲ್ಲಿ ನೀಡಿದ ಉತ್ತಮ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸೋಲು ಹಾಗೂ ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ಭಾರತ ತಂಡದ ಜೊತೆ ನಿಲ್ಲೋಣ ಎಂದು ಹೇಳಿದ್ದಾರೆ.
ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಿನಲ್ಲಿ ಅಚ್ಚಳಿಯದೆ ಉಳಿಯಲಿದೆ ಎಂದು ಪೋಸ್ಟ್ ಮಾಡಿದ್ದಾರೆ.
ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ.
ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ.
– ಮುಖ್ಯಮಂತ್ರಿ @siddaramaiah #WorldcupFinal #WorldCup… pic.twitter.com/0jADtM5717— CM of Karnataka (@CMofKarnataka) November 19, 2023
Disclaimer: This Story is auto-aggregated by a Syndicated Feed and has not been Created or Edited By City Big News Staff.