ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಈಗಾಗಲೇ ಉಲ್ಬಣಗೊಂಡ ಪರಿಣಾಮವಾಗಿ ದಿನದಿಂದ ದಿನಕ್ಕೆ ಸೋಂಕಿನ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡುವ ಪ್ರಸ್ತಾಪವನ್ನು ಕೆಲವರು ಸಚಿವರು ಸೂಚಿಸಿದ್ದು, ಇದಕ್ಕೆ ಮಾನ್ಯ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಅದಕ್ಕೆ ಸಹಮತಿಯನ್ನು ನೀಡಿಲ್ಲ. ಸಚಿವರ ಲಾಕ್ ಡೌನ್ ಪ್ರಸ್ತಾಪವನ್ನು ಮುಖ್ಯಮಂತ್ರಿ ಅವರು ಬಹಳ ನಯವಾಗಿಯೇ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.‌

ಯಡಿಯೂರಪ್ಪ ನವರು ಲಾಕ್ ಡೌನ್ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ.‌ ಅದರ ಬದಲಾಗಿ ಮತ್ತಷ್ಟು ಬಿಗಿಯಾದ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆಯೆಂದೂ, ತಜ್ಞರು ಕೂಡಾ ಲಾಕ್ ಡೌನ್ ಮಾಡುವುದರಿಂದ ಸೋಂಕು ಹರಡುವುದನ್ನು ಮುಂದೂಡಬಹುದೇ ಹೊರತು ಅದಕ್ಕೆ ಕಡಿವಾಣ ಹಾಕಲು ಸಾಧ್ಯವಿಲ್ಲ ಎಂಬ ಅಭಿಪ್ರಾಯವನ್ನು ‌ನೀಡಿದ್ದಾರೆಂಬ ವಿಚಾರವನ್ನು ಮಾನ್ಯ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸೋಂಕಿಗೆ ಕಡಿವಾಣ ಹಾಕಲು ವಲಯವಾರು ಸಚಿವರಿಗೆ ಉಸ್ತುವಾರಿ ನೀಡಬಹುದು ಎಂದಿದ್ದಾರೆ.

ಇದಲ್ಲದೇ ಮತ್ತೊಮ್ಮೆ ಲಾಕ್ ಡೌನ್ ಮಾಡಿದರೆ ಅದರಿಂದ ರಾಜ್ಯದ ಆರ್ಥಿಕ ವ್ಯವಸ್ಥೆ ಮೇಲೆ ಅದು ವ್ಯತಿರಿಕ್ತವಾಗಿ ಪರಿಣಾಮವನ್ನು ಬೀರಲಿದೆ ಎಂದಿರುವ ಯಡಿಯೂರಪ್ಪನವರು, ಜನತೆಯಲ್ಲಿ ಜಾಗೃತಿಯನ್ನು ಮೂಡಿಸುವ ಅಗತ್ಯವಿದೆ ಎಂದಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಆರ್ಥಿಕ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ, ಜನರಲ್ಲಿ ಹೇಗೆ ಜಾಗೃತಿ ಮೂಡಿಸಬೇಕು ಎಂಬುದನ್ನು ಆಲೋಚಿಸಿ ಅನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here